News Karnataka Kannada
Tuesday, April 23 2024
Cricket
ಕರ್ನಾಟಕ

ವಸತಿಗಾಗಿ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

Photo Credit :

ವಸತಿಗಾಗಿ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ: ಕಡುಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯಿಸಿ ಎಐಟಿಯುಸಿ ಸಂಘಟನೆಯ ನೇತೃತ್ವದಲ್ಲಿ ವಸತಿ ರಹಿತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬಡವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಕಳೆದು 20 ವರ್ಷಗಳಿಂದ ಜಿಲ್ಲೆಯಲ್ಲಿ ಸೂರಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದರೂ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲವೆಂದು ಆರೋಪಿಸಿದರು.

ನಿವೇಶನ ಮತ್ತು ವಸತಿ ಇಲ್ಲ ಕೊಡಗಿನ ಸಾವಿರಾರು ಬಡವರು ತೋಟದ ಲೈನ್ ಮನೆಗಳಲ್ಲಿ, ನದಿ ತೀರಗಳಲ್ಲಿ, ಬಾಡಿಗೆ ಮನೆಗಳಲ್ಲಿ, ಪೈಸಾರಿ ಜಾಗಗಳಲ್ಲಿ ವಾಸ ಮಾಡುತ್ತಿದ್ದಾರೆ. ಈ ಪೈಕಿ ಆದಿವಾಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸರ್ಕಾರ ತಕ್ಷಣ ಎಲ್ಲರಿಗೂ ಮನೆ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಅ.2 ರಿಂದ ಜಿಲ್ಲೆಯ ವಿವಿಧ ಗ್ರಾ.ಪಂ ಎದುರು ಸರಣಿ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡಗೇರಿಕೆಗಾಗಿ ಒತ್ತಾಯಿಸಲಾಗಿದೆ. ಈ ಬಗ್ಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ಸೋಮಪ್ಪ ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು