News Karnataka Kannada
Tuesday, April 23 2024
Cricket
ಕರ್ನಾಟಕ

ವಾಹನ ಅನವಶ್ಯಕ ಓಡಾಟ- ವಾಹನಗಳು ವಶ

Photo Credit :

 ವಾಹನ ಅನವಶ್ಯಕ  ಓಡಾಟ-   ವಾಹನಗಳು ವಶ

ಮಡಿಕೇರಿ: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೆ ತರಲಾಗಿದ್ದು, ಕೊಡಗು ಜಿಲ್ಲಾಡಳಿತ ಸಹ ಟಫ್ ರೂಲ್ಸ್ ಮಾಡಿದೆ. ವಾರದಲ್ಲಿ ಎರಡು ದಿನ ಮಾತ್ರ ಜನ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಉಳಿದ ದಿನಗಳಲ್ಲಿ ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.
ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅದರೂ ಗ್ರಾಮೀಣ ಭಾಗದಲ್ಲಿ ಕೆಲವರು ಅನಾವಶ್ಯಕವಾಗಿ ಸಂಚರಿಸುತ್ತಿದ್ದಾರೆ. ಈ ಹಿನ್ನೆಲೆ ಮಡಿಕೇರಿ ತಾಲೂಕಿನ ನಾಪೋಕ್ಲಿವಿನ ಪೊಲೀಸರು ಇಂದು ಬೆಳಗ್ಗೆಯಿಂದಲೇ ಪಟ್ಟಣದಲ್ಲಿ ಅನವಶ್ಯಕವಾಗಿ ಓಡಾಡುತ್ತಿರುವವರ ವಾಹಗಳನ್ನು ಸೀಜ್ ಮಾಡಿದ್ದಾರೆ.ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಜನ ಮಾತ್ರ ಇದರ ಅರಿವು ಇಲ್ಲದೆ ಪಟ್ಟಣ ಪ್ರದೇಶಗಳಲ್ಲಿ ಸುಖಾಸುಮ್ಮನೆ ಓಡಾಡುತ್ತಿದ್ದಾರೆ. ಹೀಗಾಗಿ ನಾಪೋಕ್ಲು ಠಾಣೆಯ ಎಸ್‍ಐ ಕಿರಣ್ ಕುಮಾರ್ ಹಾಗೂ ಸಿಬ್ಬಂದಿ ಅನವಶ್ಯಕವಾಗಿ ಓಡಾಡುತ್ತಿದ್ದ 20ಕ್ಕೂ ಹೆಚ್ಚು ಬೈಕ್, 6 ಪಿಕಪ್, 5 ಕಾರ್ ಹಾಗೂ 3 ಮೊಪೆಡ್ ಸೇರಿದಂತೆ ಹಲವು ವಾಹಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು