News Karnataka Kannada
Monday, April 22 2024
Cricket
ಕರ್ನಾಟಕ

ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಡಿಸಿ ಹೋಮ್ ಕ್ವಾರಂಟೈನ್

Photo Credit :

ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಡಿಸಿ ಹೋಮ್ ಕ್ವಾರಂಟೈನ್

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ಅವರು ಕೂಡ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಈಶ್ವರಪ್ಪ ಅವರ ಮನೆಯ ಕೆಲಸದವರೊಬ್ಬರಿಗೆ ಕೊರೋನಾ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿರುವರು. ಅದೇ ರೀತಿ ಈಶ್ವರಪ್ಪ ಅವರ ಜತೆಗೆ ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಕೂಡ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ.

ಸೋಮವಾರ ಈಶ್ವರಪ್ಪ ಅವರ ಮನೆ ಕೆಲಸದವರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಇದರ ಬಳಿಕ ಈಶ್ವರಪ್ಪ, ಶಿವಕುಮಾರ್ ಸಹಿತ ಸುಮಾರು 21 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಇದೆಲ್ಲವೂ ನೆಗೆಟಿವ್ ಬಂದಿದೆ.

ಶಿವಮೊಗ್ಗದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆ ಬಳಿಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು