News Karnataka Kannada
Saturday, April 20 2024
Cricket
ಕರ್ನಾಟಕ

ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರ ರಕ್ಷಣೆ

Photo Credit :

ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ಯಾಂತ್ರಿಕ ದೋಣಿಯಲ್ಲಿ ಸಿಲುಕಿದ ಮೀನುಗಾರರನ್ನು  ಭಾರತೀಯ ಕೋಸ್ಟ್ ಗಾರ್ಡ್ ಶುಕ್ರವಾರ ರಕ್ಷಣೆ ಮಾಡಿದೆ.

ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಯಾಂತ್ರಿಕ ದೋಣಿ ಹೊನ್ನಾವರ ಬಂದರು ಮೂಲಕ ಮೀನುಗಾರಿಕೆಗೆ ತೆರಳಿತ್ತು. ಗುರುವಾರ ಮಧ್ಯಾಹ್ನ 2 ಗಂಟೆಗೆ ದೋಣಿಯ ಮಶೀನ್ ಹಾಳಾಗಿದ್ದರಿಂದ ಸಮಸ್ಯೆಗೆ ಸಿಲುಕಿದ್ದರು. ಬೋಟಲ್ಲಿ 24 ಮೀನುಗಾರರಿದ್ದರು.

ಅಪಾಯಕ್ಕೆ ಸಿಲುಕಿದ ಮೀನುಗಾರರು ರಕ್ಷಣೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಪೊಲೀಸರ ಸಹಾಯ ಕೋರಿದ್ದರು. ಮಂಗಳೂರಿನ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ನೌಕೆಯೊಂದಿಗೆ ಸ್ಥಳಕ್ಕೆ ತೆರಳಿದರಾದರೂ ಹವಾಮಾನ ವೈಪರೀತ್ಯದ ಕಾರ್ಯಾಚರಣೆ ಸಾಧ್ಯವಾಗಿರಲಿಲ್ಲ. ಶುಕ್ರವಾರ ಮಳೆ ಇದ್ದರೂ ಸಹ ರಕ್ಷಣಾ ಕಾರ್ಯಾಚರಣೆಗೆ ಇಳಿದು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು