News Karnataka Kannada
Saturday, April 13 2024
Cricket
ಕರ್ನಾಟಕ

ಸರ್ಕಾರದ ವಿರುದ್ಧ ಐಎನ್‍ಟಿಯುಸಿ ಪ್ರತಿಭಟನೆ

Photo Credit :

ಸರ್ಕಾರದ ವಿರುದ್ಧ ಐಎನ್‍ಟಿಯುಸಿ ಪ್ರತಿಭಟನೆ

ಮಡಿಕೇರಿ: ಕೊರೋನಾ ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪರಿಹಾರದ ಹಣವನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ನೀಡುವಂತೆ ಒತ್ತಾಯಿಸಿ ಐಎನ್‍ಟಿಯುಸಿ ನೇತೃತ್ವದಲ್ಲಿ ಕೊಡಗು ಜಿಲ್ಲಾ ವಾಹನ ಚಾಲಕರು ಹಾಗೂ ಮಾಲೀಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ವಾಹನ ಮಾಲೀಕರು ಹಾಗೂ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವಾಹನ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಸಂಪತ್ ಕೊರೋನಾ ಸಂದರ್ಭ ರಾಜ್ಯ ಸರ್ಕಾರ ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಎಲ್ಲಾ ಫಲಾನುಭವಿಗಳಿಗೆ ಇಲ್ಲಿಯವರೆಗೆ ಪರಿಹಾರ ದೊರೆತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಕಷ್ಟದಲ್ಲಿರುವ ಚಾಲಕರ ಹಿತ ಕಾಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡನೀಯ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು