News Karnataka Kannada
Saturday, April 13 2024
Cricket
ಕರ್ನಾಟಕ

ಸರ್ಕಾರಿ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ: ಡಿಸಿಎಂ ಗೋವಿಂದ ಕಾರಜೋಳ

Photo Credit :

ಸರ್ಕಾರಿ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ: ಡಿಸಿಎಂ ಗೋವಿಂದ ಕಾರಜೋಳ

ದಾವಣಗೆರೆ: ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದ ಎಂ.ಕಾರಜೋಳ ಹೇಳಿದರು.

ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಖಾಸಗಿ ಶಾಲೆಯ ಸುಮಾರು 34 ಸಾವಿರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಮಾಡಿಕೊಳ್ಳುತ್ತಿದ್ದಾರೆ. ಇದು ಹೆಮ್ಮೆಯ ವಿಷಯ ಎಂದರು.

ಇಂದಿನ ದಿನಗಳಲ್ಲಿ ಪೋಷಕರು, ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖ ಮಾಡಲು ಮುಖ್ಯ ಕಾರಣ ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಯಾಗಿದೆ ಎಂದ ಅವರು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸಾರ್ವಜನಿಕರು ಬೆಂಬಲಿಸಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು