News Karnataka Kannada
Thursday, April 25 2024
ಕರ್ನಾಟಕ

ಸಿ.ಪಿ.ಯೋಗೇಶ್ವರ್ ಸದಸ್ಯತ್ವ ರದ್ದುಗೊಳಿಸಲು ಕಾಂಗ್ರೆಸ್ ಒತ್ತಾಯ

Photo Credit :

ಸಿ.ಪಿ.ಯೋಗೇಶ್ವರ್ ಸದಸ್ಯತ್ವ ರದ್ದುಗೊಳಿಸಲು ಕಾಂಗ್ರೆಸ್ ಒತ್ತಾಯ

ಮಡಿಕೇರಿ: ಬಹುಕೋಟಿ ಹಗರಣದ ಆರೋಪ ಎದುರಿಸುತ್ತಿರುವ ಸಿ.ಪಿ.ಯೋಗೇಶ್ವರ್ ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದು ಪಡಿಸಬೇಕೆಂದು ಕೆಪಿಸಿಸಿಯ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಎ.ಎಸ್.ಪೊನ್ನಣ್ಣ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೆಗಾಸಿಟಿ ಯೋಜನೆಯ ಹಗರಣದಲ್ಲಿ ಸಿಲುಕಿರುವ ಯೋಗೇಶ್ವರ್ ಅವರಿಗೆ ಮೇಲ್ಮನೆ ಸದಸ್ಯರಾಗಲು ಯಾವುದೇ ಅರ್ಹತೆಗಳಲಿಲ್ಲದಿದ್ದರೂ ಸಂವಿಧಾನಕ್ಕೆ ವಿರುದ್ಧವಾಗಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಆರೋಪಿಸಿದರು.

ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲು ಸೆ.25 ರಂದು ಕಾಲಾವಕಾಶ ಕೋರಿದ್ದರೂ ನಮಗೆ ಯಾವುದೇ ಉತ್ತರ ಬಂದಿಲ್ಲ. ಮಾಹಿತಿ ಹಕ್ಕು ಮೂಲಕ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿ ನಾಮ ನಿರ್ದೇಶನವಾದ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದರೆ ಇದಕ್ಕೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಟೀಕಿಸಿದರು.

ಸಿ.ಪಿ.ಯೋಗೇಶ್ವರ್ ಅವರ ವಿರುದ್ಧ 9 ಚಾರ್ಚ್‍ಶೀಟ್ ದಾಖಲಾಗಿದ್ದು, ಈಗಲೂ ಅವರು ನ್ಯಾಯಾಲಯದಲ್ಲಿ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಆರೋಪಿ ಸ್ಥಾನದಲ್ಲಿರುವ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಎಸಗಲಾಗಿದೆ ಎಂದು ಪೊನ್ನಣ್ಣ ಆರೋಪಿಸಿದರು.

ಮೇಲ್ಮನೆಗೆ ಸದಸ್ಯರಾಗಿ ನೇಮಕಗೊಳ್ಳುವವರು ಯಾವುದಾದರೊಂದು ಕ್ಷೇತ್ರದಲ್ಲಿ ವಿಶೇಷ ಜ್ಞಾನ ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಯೋಗೇಶ್ವರ್ ಅವರಿಗೆ ಈ ರೀತಿಯ ಯಾವುದೇ ಅರ್ಹತೆಗಳಿಲ್ಲ. ಅಸಂವಿಧಾನಿಕ ರೀತಿಯಲ್ಲಿ ಹಿರಿಯರ ಮನೆ ಪ್ರವೇಶಿಸಿರುವ ಯೋಗೇಶ್ವರ್ ಅವರ ವಿಧಾನ ಪರಿಷತ್ ಸ್ಥಾನವನ್ನು ರದ್ದುಗೊಳಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಪೊನ್ನಣ್ಣ ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು