News Karnataka Kannada
Monday, April 22 2024
Cricket
ಕರ್ನಾಟಕ

ಸೀಲ್ ಡೌನ್ ಪ್ರದೇಶದ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಲು ಕರವೇ ಕಾರ್ಯಕರ್ತರ ಮನವಿ

Photo Credit :

ಸೀಲ್ ಡೌನ್ ಪ್ರದೇಶದ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಲು ಕರವೇ ಕಾರ್ಯಕರ್ತರ ಮನವಿ

ಮಡಿಕೇರಿ: ಕೊರೋನಾ ಸೋಂಕಿನಿಂದಾಗಿ ಶನಿವಾರಸಂತೆ ಹೋಬಳಿಯ ಸುತ್ತಮುತ್ತ ಸೀಲ್ ಡೌನ್ ಮಾಡಲಾದ ಪ್ರದೇಶದಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಗತ್ಯ ಸಾಮಾಗ್ರಿಗಳನ್ನು ಒದಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಅಲ್ಲದೇ ಸಿಲ್ ಡೌನ್ ಆದ ಪ್ರದೇಶದಲ್ಲಿ ಅನೇಕ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದ್ದು ಪಡಿತರ ಸಾಮಾಗ್ರಿಗಳಿಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೀಲ್ ಡೌನ್ ಆದ ಪ್ರದೇಶಕ್ಕೆ ಪಡಿತರ ಸಾಮಾಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.

ಸೀಲ್ ಡೌನ್ ಪ್ರದೇಶದಲ್ಲಿ ಬಡ ಕೂಲಿ ಕಾರ್ಮಿಕರು ಮತ್ತು ಗರ್ಭಿಣಿ ಮಹಿಳೆಯರು,

ಬಾಣಂತಿಯರು ಹಾಗೂ ಸಣ್ಣ ಮಕ್ಕಳು, ಹಿರಿಯನಾಗರಿಕರಿದ್ದು, ಅವರಿಗೆ ಸಮರ್ಪಕವಾದ ಜೌಷಧಿ, ಆಹಾರಗಳನ್ನು ನೀಡುವ ಅಗತ್ಯವಿದೆ. ಆದರೆ ಈ ಪ್ರದೇಶದಿಂದ ಯಾರೂ ಹೊರಹೋಗಲು ಸಾಧ್ಯವಾಗದೇ ಇರುವುದರಿಂದ ಶನಿವಾರಂಸತೆಯ ನಿರ್ಭಂದಿತ ಪ್ರದೇಶಗಳಿಗೆ ಕಂದಾಯ ಅಧಿಕಾರಿಗಳು ಮತ್ತು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಕರವೇ ಕಾರ್ಯಕರ್ತರು ಆಗ್ರಹಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು