News Karnataka Kannada
Thursday, April 18 2024
Cricket
ಕರ್ನಾಟಕ

ಸೀಲ್ ಡೌನ್ ಬಡಾವಣೆ  ನಿವಾಸಿಗಳಿಗೆ ಉಚಿತ ಆಹಾರಕ್ಕಾಗಿ ಪ್ರತಿಭಟನೆ

Photo Credit :

ಸೀಲ್ ಡೌನ್ ಬಡಾವಣೆ  ನಿವಾಸಿಗಳಿಗೆ ಉಚಿತ ಆಹಾರಕ್ಕಾಗಿ ಪ್ರತಿಭಟನೆ

ತಿ.ನರಸೀಪುರ: ಸೀಲ್ ಡೌನ್ ಬಡಾವಣೆಗಳ ನಿವಾಸಿಗಳಿಗೆ ಉಚಿತ ಆಹಾರ ಪದಾರ್ಥ ವಿತರಣೆ ಮಾಡಬೇಕು ಹಾಗೂ ಕೋವಿಡ್ ಚಿಕಿತ್ಸೆಯನ್ನು ಸರ್ಕಾರ ಸಂಪೂರ್ಣ ಉಚಿತವಾಗಿ ನೀಡುವಂತೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾರ್ಮಿಕರ ಬೇಡಿಕೆಯ ದಿನದ ಅಂಗವಾಗಿ ಪಟ್ಟಣದ ಕಾರ್ಮಿಕ ಇಲಾಖೆ ಮತ್ತು ತಾಲೂಕು ಕಚೇರಿ ಬಳಿ ಧರಣಿ ನಡೆಸಿ ತಹಸೀಲ್ದಾರ್ ಡಿ. ನಾಗೇಶ್ ಅವರು ಹಕ್ಕೊತ್ತಾಯದ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ತಾಲ್ಲೂಕು ಘಟಕದ ಅಧ್ಯಕ್ಷ ಆಲಗೂಡು ಪುಟ್ಟಮಲ್ಲಯ್ಯ ಮತನಾಡಿ ಕೋವಿಡ್ ಚಿಕಿತ್ಸೆಗೆ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿ ಪಡಿಸಿರುವುದನ್ನು ವಾಪಸ್ಸು ಪಡೆದು ಉಚಿತ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದರು.

ಮುಂದುವರೆದು ಮಾತನಾಡಿದ ಅವರು ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೆಲಸ ಕಳೆದು ಕೊಂಡಿರುವ ಕಟ್ಟಡ ಕಾರ್ಮಿಕರಿಗೆ ವಾರಕ್ಕೆ 2 ಸಾವಿರದಂತ್ತೆ 3 ತಿಂಗಳವರಿಗೆ ಪರಿಹಾರ ಧನ ನೀಡಬೇಕು, ವಲಸೆ ಮತ್ತು ಸ್ಥಳೀಯ ಕಾರ್ಮಿಕರಿಗೆ ನರೇಗಾ ಯೋಜನೆಯಲ್ಲಿ ಕೆಲಸ ನೀಡಬೇಕು ಹಾಗೂ ನರೇಗಾ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು, ಸೇವಾ ಸಿಂಧು ಕೇಂದ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಹಾಗೂ ಕಾರ್ಮಿಕ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶ್ರೀನಿವಾಸ್, ವಿಜಯ ಕುಮಾರ್, ಸಿದ್ದರಾಜು, ಪ್ರತಾಪ್ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು