News Karnataka Kannada
Wednesday, April 17 2024
Cricket
ಕರ್ನಾಟಕ

ಸೋಂಕಿತರ ಸಂಖ್ಯೆ ಹೆಚ್ಚಳ: ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ

Photo Credit :

ಸೋಂಕಿತರ ಸಂಖ್ಯೆ ಹೆಚ್ಚಳ: ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಮಡಿಕೇರಿ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಹಗಲು ರಾತ್ರಿ ಶ್ರಮ ವಹಿಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯೊಂದಿಗೆ ಯಾವುದೇ ಆತಂಕ ಪಡದಂತೆ ಅಭಯ ನೀಡಿದರು.

ಕೋವಿಡ್-19 ನಿಯಂತ್ರಿಸಲು ಲಾಕ್‍ಡೌನ್ ಒಂದೇ ಶಾಶ್ವತ ಪರಿಹಾರವಲ್ಲ. ಆದ್ದರಿಂದ ಪ್ರತಿಯೊಬ್ಬರೂ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು. ಜೊತೆಗೆ ಅಂತರ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿದ್ದರೂ ಸಹ ಜಿಲ್ಲೆಯಲ್ಲಿ ಏಕೆ ಲಾಕ್‍ಡೌನ್ ಮಾಡುತ್ತಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಆದರೆ ಲಾಕ್‍ಡೌನ್ ಶಾಶ್ವತ ಪರಿಹಾರವಲ್ಲ. ಕೊಡಗು ಜಿಲ್ಲೆಗೂ ಬೇರೆ ಜಿಲ್ಲೆಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಖಾಸಗಿ ಆಸ್ಪತ್ರೆಗಿಂತಲೂ ಸರ್ಕಾರಿ ವೈದ್ಯಕೀಯ ಕೇಂದ್ರಗಳನ್ನೇ ಜಿಲ್ಲೆ ಅವಲಂಬಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 250 ಹಾಸಿಗೆ ಸಾಮರ್ಥ್ಯದ 1 ಕೋವಿಡ್ ಜಿಲ್ಲಾಸ್ಪತ್ರೆ ಇದೆ. ಇದರಲ್ಲಿ 31 ಐಸಿಯು ಬೆಡ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ 25 ವೆಂಟಿಲೇಟರ್‍ ಗಳನ್ನು ಸಹ ಸಿದ್ದಪಡಿಸಲಾಗಿದೆ. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಕುಶಾಲನಗರದಲ್ಲಿ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಒಟ್ಟಾರೆ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ 2 ಸಾವಿರ ಹಾಸಿಗೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಕೋವಿಡ್-19 ವಿರುದ್ಧದ ಹೋರಾಟ ಮ್ಯಾರಥಾನ್ ಇದ್ದಂತೆ. ಸ್ಪಲ್ಪ ಓಡಿದ ಕೂಡಲೇ ನಾವೇ ಗೆದ್ದೆವು ಎಂದು ಹೇಳಿಕೊಳ್ಳುವಂತಿಲ್ಲ. ಹೀಗಿರುವಾಗ ವ್ಯಾಪಾರ ವಹಿವಾಟನ್ನೂ ಹೆಚ್ಚು ದಿನ ಬಂದ್ ಮಾಡಲು ಸಾಧ್ಯವಿಲ್ಲ. ಸಾಕಷ್ಟು ಮಂದಿಗೆ ಸೋಂಕಿನ ಲಕ್ಷಣವಿರುವುದೇ ಇಲ್ಲ. ಕೋವಿಡ್‍ನಿಂದಾಗಿ ಬಹುತೇಕರಿಗೆ ಆರೋಗ್ಯ ಸಂಬಂಧಿತ ಸಮಸ್ಯೆಯೇ ಉಂಟಾಗಿಲ್ಲ. ಆದರೆ, ಸೋಂಕಿತರನ್ನು ಗ್ರಾಮಸ್ಥರು ಸಂಶಯದಿಂದ ನೋಡುವಂತಾಗಿದೆ. ಇದರಿಂದಾಗಿ ಸೋಂಕಿತರು ಮುಜಗರಕ್ಕೀಡಾಗುತ್ತಿದ್ದಾರೆ. ಆದ್ದರಿಂದ ನಾವು ಕೋವಿಡ್-19 ವಿರುದ್ಧ ಹೋರಾಡಬೇಕು. ಕೋವಿಡ್ -19 ಸೋಂಕಿತ ವ್ಯಕ್ತಿಯೊಂದಿಗೆ ಅಲ್ಲ ಎಂದು ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು