News Karnataka Kannada
Tuesday, April 23 2024
Cricket
ಕರ್ನಾಟಕ

ಸ್ವಾತಂತ್ರ್ಯ ದಿನಾಚರಣೆಗೆ ನೌಕರರ ಹಾಜರಾತಿ ಕಡ್ಡಾಯ

Photo Credit :

ಸ್ವಾತಂತ್ರ್ಯ ದಿನಾಚರಣೆಗೆ ನೌಕರರ ಹಾಜರಾತಿ ಕಡ್ಡಾಯ

ಹಾಸನ: ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ, ಶಿಷ್ಠಾಚಾರದಲ್ಲಿ ಲೋಪವಾಗದಂತೆ ಆಯೋಜಿಸಬೇಕಿದ್ದು, ಎಲ್ಲ ಇಲಾಖೆಗಳು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕುಡಿಯುವ ನೀರು ಮತ್ತು ಇತರ ಪೂರಕ ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮವಹಿಸಿ ಎಂದರಲ್ಲದೆ, ಕಾರ್ಯಕ್ರಮ ನಡೆಯುವ ಸ್ಥಳವನ್ನು ಸ್ಯಾನಿಟೈಸ್ ಮಾಡಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜ ಆರೋಹಣಕ್ಕೆ ಪಥ ಸಂಚಲನ ಹಾಗೂ ಒಂದೇ ಮಾತರಂ ಮತ್ತು ನಾಡಗೀತೆ ಹಾಡಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು