News Karnataka Kannada
Tuesday, April 16 2024
Cricket
ಕರ್ನಾಟಕ

ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗೆ ಸೂಚನೆ – ಗದಗ ಡಿಸಿ ಎಂ.ಸುಂದರೇಶ್ ಬಾಬು

Photo Credit :

ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗೆ ಸೂಚನೆ - ಗದಗ ಡಿಸಿ ಎಂ.ಸುಂದರೇಶ್ ಬಾಬು

ಗದಗ: ಜಿಲ್ಲಾಡಳಿತ ವತಿಯಿಂದ ಆ.೧೫ರಂದು ಆಚರಿಸಲಾಗುತ್ತಿರುವ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ದತೆಗೆ ಮಾಡಿಕೊಳ್ಳಬೇಕು. ಕೋವಿಡ್-೧೯ ಸಂಧಿಗ್ಧ ಪರಿಸ್ಥಿಯಲ್ಲೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

 

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯಾದ್ಯಂತ ಸ್ವಾತಂತ್ರ್ಯೋತ್ಸವದ ಸಂಭ್ರಮವು ಪ್ಲಾಸ್ಟಿಕ್ ಮುಕ್ತವಾಗಿರಬೇಕು. ಆಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಹಾಗೂ ಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು. ಈ ವೇಳೆ ಪ್ರತಿಯೊಬ್ಬರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

 

 ಪ್ರತಿವರ್ಷದಂತೆ ಗೌರವ ಧ್ವಜವಂದನೆಯ ಫರೇಡ್‌ನಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೊರೊನಾ ರ್‍ಯಾಪಿಡ್ ಟೆಸ್ಟ್ ಮಾಡಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ಅಲ್ಲದೇ, ನಗರದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ರಮುಖ ಬೀದಿ, ಕಟ್ಟಡ ಹಾಗೂ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಧ್ವಜಾರೋಹಣ ಸಂದರ್ಭದಲ್ಲಿ ವ್ಯತಿರಿಕ್ತ ಘಟನೆಗಳು ಸಂಭವಿಸದಂತೆ ನಿಗಾವಹಿಸಬೇಕು.

 

ಈ ಸಂದರ್ಭದಲ್ಲಿ ಸಚಿವರ ಸಂದೇಶ, ಸಾಧಕರಿಗೆ ಸನ್ಮಾನ, ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ನಿರ್ಮಾಣ, ಬಂದೋಬಸ್ತ್, ಶಾಮಿಯಾನ ವ್ಯವಸ್ಥೆ ಹಾಗೂ ಉಪಹಾರ ವ್ಯವಸ್ಥೆಗಳನ್ನು ಶಿಷ್ಟಾಚಾರ ಮಾರ್ಗಸೂಚಿಗಳಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಸೂಚಿಸಿದರು.

 

   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು