News Karnataka Kannada
Saturday, April 13 2024
Cricket
ಕರ್ನಾಟಕ

ಹಂದಿ ಬೇಟೆಗೆ ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದು ಸಾವು

Photo Credit :

ಹಂದಿ ಬೇಟೆಗೆ ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದು ಸಾವು

ಮೈಸೂರು: ಬೇಟೆಗಾರರು ಹಂದಿ ಬೇಟೆಗೆಂದು ಇಟ್ಟಿದ್ದ ಉರುಳಿಗೆ ಗಂಡು ಚಿರತೆಯೊಂದು ಸಿಲುಕಿಕೊಂಡು ಹೊರ ಬರಲಾರದೆ ಮೃತಪಟ್ಟಿರುವ ಘಟನೆ ಇಂದು ಪಿರಿಯಾಪಟ್ಟಣ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿಯ ತಿತಿಮತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಡಿಸಿಎಫ್ ಮಹೇಶ್ ಕುಮಾರ್, ಎಸಿಎಫ್ ಸತೀಶ್, ವೈದ್ಯಾಧಿಕಾರಿ ಡಾ.ಮುಜೀಬ್, ವನ್ಯಜೀವಿ ಸಂರಕ್ಷಣಾಧಿಕಾರಿ ಕೃತಿಕಾ, ಎನ್.ಟಿ.ಸಿ ನಿರ್ದೇಶಕ ವೆಂಕಟನಾಯ್ಡು ಆಗಮಿಸಿ ಪರಿಶೀಲಿಸಿದರು.

ಮರಣೋತ್ತರ ಪರೀಕ್ಷೆ ನಡೆಸಿದ ಡಾ.ಮುಜೀಬ್ ಮಾತನಾಡಿ ಮೃತ ಗಂಡು ಚಿರತೆ ಸುಮಾರು 6 ವರ್ಷದ್ದಾಗಿದ್ದು, ಕೇಬಲ್ ತಂತಿಯ ಉರುಳು ತಲೆಯಲ್ಲಿ ಸಿಲುಕಿ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಅದು ಹೊಟ್ಟೆಯ ಭಾಗಕ್ಕೆ ಬಿಗಿದುಕೊಂಡು ಮೃತಪಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಆರ್‌ಎಫ್‌ಒ ಹನುಮಂತರಾಜು, ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿಗಳು ಚಿರತೆಯ ಅಂತ್ಯಕ್ರಿಯೆ ನೆರವೇರಿಸಿದರು. ಕಳೆದ ವರ್ಷ ಪಿರಿಯಾಪಟ್ಟಣ ತಾಲೂಕಿನ ಮುಮ್ಮಡಿ ಕಾವಲು ಅರಣ್ಯ ಪ್ರದೇಶದಲ್ಲಿ ಇದೇ ರೀತಿ ಬೇಟೆಗಾರರು ಇಟ್ಟ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿತ್ತು. ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು