News Karnataka Kannada
Saturday, April 13 2024
Cricket
ಕರ್ನಾಟಕ

ಹಳೇ ಬಸ್ ನಿಲ್ದಾಣದ ಕಾಮಗಾರಿ ಕಾರ್ಯ ಆರಂಭಿಸಲು ಮಡಿಕೇರಿ ಜಿಲ್ಲಾಧಿಕಾರಿ ಸೂಚನೆ

Photo Credit :

ಹಳೇ ಬಸ್ ನಿಲ್ದಾಣದ ಕಾಮಗಾರಿ ಕಾರ್ಯ ಆರಂಭಿಸಲು ಮಡಿಕೇರಿ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ನಗರದ ಖಾಸಗಿ ಹಳೇ ಬಸ್ ನಿಲ್ದಾಣದ ಬಳಿಯ ತಡೆಗೋಡೆ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದು, ತಕ್ಷಣ ನಿರ್ಮಾಣ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ.

ನಗರದ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ನಗರ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಖಾಸಗಿ ಹಳೇ ಬಸ್ ನಿಲ್ದಾಣದ ಕಾಮಗಾರಿ ಆರಂಭಿಸಲು ಕಾರ್ಯಾದೇಶ ನೀಡಬೇಕು ಎಂದು ಪೌರಾಯುಕ್ತರು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಇಂದಿರಾ ಕ್ಯಾಂಟೀನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನಿವಾಸದ ಬಳಿ ತಡೆಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ವಿರಾಜಪೇಟೆಯ ಅಯ್ಯಪ್ಪ ಬೆಟ್ಟದ ನಿರಾಶ್ರಿತರಿಗೆ ವಸತಿ ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ನಿರ್ದೇಶನ ನೀಡಿದ್ದು, ಅದರಂತೆ ಪ.ಪಂ.ಮುಖ್ಯಾಧಿಕಾರಿ ಅವರು ತ್ವರಿತ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು.

ನಗರೋತ್ಥಾನ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದಾದರೂ ಕಾಮಗಾರಿ ಬದಲಾವಣೆ ಇದ್ದಲ್ಲಿ ಸ್ಥಳೀಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದು ಅನುಮೋದನೆ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು