News Karnataka Kannada
Wednesday, April 24 2024
Cricket
ಕರ್ನಾಟಕ

ಹಾವೇರಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ 5891 ವಿದ್ಯಾರ್ಥಿಗಳು ಹಾಜರ್

Photo Credit :

ಹಾವೇರಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ 5891 ವಿದ್ಯಾರ್ಥಿಗಳು ಹಾಜರ್

ಹಾವೇರಿ: ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಜರುಗಿದ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆಗೆ ಗಣಿತ ವಿಷಯದ 5891 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಪೂರಕ ಪರೀಕ್ಷೆಗೆ ನೊಂದಾಯಿಸಿದ 6572 ವಿದ್ಯಾರ್ಥಿಗಳ ಪೈಕಿ 681 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆಗೆ ಹಾಜರಾದ 5891 ವಿದ್ಯಾರ್ಥಿಗಳ ಪೈಕಿ 5652 ಪುನರಾವರ್ತಿತ ವಿದ್ಯಾರ್ಥಿಗಳು, 220 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಕೋವಿಡ್-19 ಹಿನ್ನೆಲೆಯಲ್ಲಿ ಅನಾರೋಗ್ಯ ನಿಮಿತ್ತ ಜೂನ್/ಜುಲೈ-2020 ಜರುಗಿದ ಪರೀಕ್ಷೆಗೆ ಗೈರುಹಾಜರಾಗಿ ಪೂರಕ ಪರೀಕ್ಷೆಗೆ ಹಾಜರಾದ 19 ವಿದ್ಯಾರ್ಥಿಗಳನ್ನು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗಿದೆ.

ಅನಾರೋಗ್ಯ ಕಾರಣ ಇಬ್ಬರು ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಹಾಗೂ ಓರ್ವ ಕೋವಿಡ್ ಪಾಸಿಟಿವ್ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್‍ನಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು