News Karnataka Kannada
Wednesday, April 24 2024
Cricket
ಕರ್ನಾಟಕ

ಹಿರಿಯ ಕಮ್ಯುನಿಸ್ಟ್ ನಾಯಕಿ, ಕೇರಳದ ಮೊದಲ ಕಂದಾಯ ಸಚಿವೆ ಗೌರಿಯಮ್ಮ ನಿಧನ

Photo Credit :

ಹಿರಿಯ ಕಮ್ಯುನಿಸ್ಟ್ ನಾಯಕಿ, ಕೇರಳದ ಮೊದಲ ಕಂದಾಯ ಸಚಿವೆ ಗೌರಿಯಮ್ಮ ನಿಧನ

ತಿರುವನಂತಪುರಂ: ಕೇರಳದ ಮೊದಲ ಕಂದಾಯ ಸಚಿವೆ ಹಾಗೂ ಹಿರಿಯ ಕಮ್ಯುನಿಸ್ಟ್ ನಾಯಕಿ ಕೆ.ಆರ್.ಗೌರಿಯಮ್ಮ ತಮ್ಮ 101ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ ಅನಾರೋಗ್ಯ ಹಿನ್ನೆಲೆ ಕೆಲವು ದಿನಗಳ ಹಿಂದೆ ಗೌರಿಯಮ್ಮರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದಲ್ಲಿ ತೀವ್ರವಾದ ಸೋಂಕಿನಿಂದಾಗಿ ಇಂದು ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಸೇರಿದಂತೆ ಸಿಪಿಐ (ಎಂ) ನಾಯಕರು ಕಂಬನಿ ಮಿಡಿದಿದ್ದಾರೆ.
ರಾಜ್ಯದಲ್ಲಿ ಕಮ್ಯುನಿಸ್ಟ್ ಪಕ್ಷದ ಸ್ಥಾಪಕರಲ್ಲಿ ಗೌರಿಯಮ್ಮ ಕೂಡ ಒಬ್ಬರು. ಕಮ್ಯುನಿಸ್ಟ್ ನಾಯಕರಾಗಿದ್ದ ಟಿ.ವಿ.ಥಾಮಸ್ ಅವರನ್ನು ವಿವಾಹವಾಗಿದ್ದರು. ಇಎಂಎಸ್ ನಂಬೂದಿರಿಪಾಡ್ ನೇತೃತ್ವದ ಮೊದಲ ಕಮ್ಯುನಿಸ್ಟ್ ಸರ್ಕಾರದಲ್ಲಿ ಕಂದಾಯ ಸಚಿವೆಯಾಗಿ ಗೌರಿಯಮ್ಮ ಸೇವೆ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು