News Karnataka Kannada
Wednesday, April 17 2024
Cricket
ಕರ್ನಾಟಕ

ಹಿರಿಯ ಬರಹಗಾರ ಪ್ರೊ. ವಸಂತ ನಿಧನ

Photo Credit :

ಹಿರಿಯ ಬರಹಗಾರ ಪ್ರೊ. ವಸಂತ ನಿಧನ

ಕಲಬುರಗಿ: ಕನ್ನಡದ ಹಿರಿಯ ಬರಹಗಾರ, ಕವಿ ಪ್ರೊ. ವಸಂತ ಕುಷ್ಟಗಿ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು.

ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಗುಲ್ಬರ್ಗಾ ಹಾರ್ಟ್ ಫೌಂಡೇಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕನ್ನಡ ಪುಸ್ತಕಲೋಕಕ್ಕೆ ತಮ್ಮ ಅನನ್ಯ ಕಾವ್ಯ ಪ್ರತಿಭೆಯಿಂದ ಮಹತ್ವದ ಕೊಡುಗೆ ಕೊಟ್ಟ ಲೇಖಕರಲ್ಲಿ ಪ್ರೊಫೆಸರ್ ವಸಂತ ಕುಷ್ಟಗಿ ಅವರೂ ಒಬ್ಬರು. ಕಲ್ಬುರ್ಗಿ ಮೂಲದ ವಸಂತ ಕುಷ್ಟಗಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಎಂ. ಎ. ಪದವಿ ಪಡೆದ ನಂತರ ಬೀದರ್ ನ ಭೂಮಿ ರೆಡ್ಡಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.

ಆನಂತರ ವಿವಿಧ ಕಾಲೇಜುಗಳಲ್ಲಿ ಅನೇಕ ಹಂತದ ಹುದ್ದೆಗಳನ್ನು ನಿರ್ವಹಿಸಿ, ಪ್ರಾಂಶುಪಾಲರಾಗಿ ನಿವೃತ್ತರಾದರು. ತೀರ್ಥ ಸಂಶೋಧನಾ ಸಂಸ್ಥೆಯ ಗೌರವ ನಿರ್ದೇಶಕ ರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ಭಕ್ತಿ ಗೋಪುರ, ಹೊಸ ಹೆಜ್ಜೆ, ಗಾಂಧಾರಿಯ ಕರುಣೆ, ಬೆತ್ತಲೆಯ ಬಾನು, ಚಂದ್ರಲಾ, ಮಾನ್ಯಖೇಟ ಮತ್ತು ಇತ್ತೀಚೆಗಿನ ಅಪ್ ಅಂಡ್ ಡೌನ್ ಋತುಚಕ್ರ ಮುಂತಾದ ಕೃತಿಗಳು ಬಹು ಜನಪ್ರಿಯವಾಗಿವೆ.

ಸನ್ಮಾನ, ಪ್ರಶಸ್ತಿ: ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ,ಗೊರೂರು ರಾಮಸ್ವಾಮಿ ಅಯ್ಯಂಗಾರ್ ಪ್ರಶಸ್ತಿ, ಸರ್ ಎಂ ವಿ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು