ಕಾಸರಗೋಡು: ಟ್ರಾಲಿ ಬ್ಯಾಗ್ ನ ಟಯರ್ ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕಾಸರಗೋಡು ನಿವಾಸಿಯನ್ನು ಕೋಜಿಕ್ಕೋ ಡ್ ನ ಕರಿಪ್ಪೂರ್ ವಿಮಾನ ನಿಲ್ದಾಣದಿಂದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಸರಗೋಡಿನ ಹಂಝ ಬಂಧಿತ. ಈತನಿಂದ 12. 25 ಲಕ್ಷ ರೂ. ಮೌಲ್ಯದ 245 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಟ್ರಾಲಿ ಬ್ಯಾಗ್ ನ ಟಯರ್ ನಲ್ಲಿ ಬಚ್ಚಿಟ್ಟು ಚಿನ್ನಾಭರಣವನ್ನು ಸಾಗಿಸುತ್ತಿದ್ದನು. ಸೋಮವಾರ ಸಂಜೆ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಈತ ಬಂದಿಳಿದಿದ್ದನು.