News Karnataka Kannada
Sunday, April 28 2024
ಕರ್ನಾಟಕ

ಅಕ್ರಮ ಕಲ್ಲು ಗಣಿಗಾರಿಕೆಗೆ ಕುಮಾರಸ್ವಾಮಿ ಬೆಂಬಲ ; ಆಪ್‌ ಆರೋಪ

Aap Bangalore 8 7 21
Photo Credit :

ಬೆಂಗಳೂರು: ರಾಜ್ಯದ   ಮೈಸೂರು  ಹಾಗೂ  ಮಂಡ್ಯ  ಜಿಲ್ಲೆಯ   ವಿವಿಧೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.
ಕೆಆರ್‍ಎಸ್ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‍ಎಸ್ ನೀರುಣಿಸುತ್ತಿದೆ. ಕೆಆರ್‍ಎಸ್ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು.
ಕೆಆರ್‍ಎಸ್‍ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್ ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ. ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ ಎಂದು ಜಗದೀಶ್ ವಿ .ಸದಂ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ರವರು ಮಾತನಾಡಿ ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ. ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು