News Karnataka Kannada
Monday, May 20 2024
ಕರ್ನಾಟಕ

ಅತ್ಯಾಚಾರಕ್ಕೆ ಖಂಡನೆ: ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

Photo Credit :

ಅತ್ಯಾಚಾರಕ್ಕೆ ಖಂಡನೆ: ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

ಮಡಿಕೇರಿ: ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪಕ್ಷ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಡಾ.ಈ.ರಾ. ದುರ್ಗಾಪ್ರಸಾದ್, ಇತ್ತೀಚಿನ ದಿನಗಳಲ್ಲಿ ಯುವತಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ಒಬ್ಬ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆದರೆ ಕನಿಷ್ಟ ಸಾಂತ್ವನ ಹೇಳುವಷ್ಟು ಸೌಜನ್ಯ ಯುಪಿ ಸರಕಾರದಲ್ಲಿ ಇಲ್ಲವಾಗಿದೆ ಎಂದ ಅವರು,  ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಎ.ಸಿ. ಸಾಬು, ರಮೇಶ್, ಗಣೇಶ್, ಮಹದೇವ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು