News Karnataka Kannada
Thursday, May 09 2024
ಕರ್ನಾಟಕ

ಅಪಘಾತವಾದ ಕಾರಿನಲ್ಲಿ ನನ್ನ ಮಗ ಇರಲಿಲ್ಲ ; ಡಿಸಿಎಂ ಲಕ್ಮಣ ಸವದಿ

Savadi M 2872020
Photo Credit :

ಮೈಸೂರು: ತಮ್ಮ ಪುತ್ರನ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿಸಿಎಂ ಲಕ್ಷ್ಮಣ ಸವದಿ, ಅಪಘಾತವಾದ ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಅದಕ್ಕೆ FIRನಲ್ಲಿ ಆತನ ಹೆಸರಿಲ್ಲ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಪಘಾತ ಅಪಘಾತವೇ ಈ ಬಗ್ಗೆ ಯಾವುದೇ ಗೊಂದಲ‌ ಬೇಡ. ಆದರೆ ಅಪಘಾತವಾದ ಕಾರಿನಲ್ಲಿ ನನ್ನ ಮಗ ಇದ್ದರು ಅಪಘಾತ ಮಾಡು ಅಂತಾ ಹೇಳುತ್ತಿರಲಿಲ್ಲ. ನನ್ನ ಮಗ ತುರ್ತಾಗಿ ಗಾಯಗೊಂಡವರ ನೆರವಿಗೆ ಧಾವಿಸಿದ್ದಾನೆ. ಆದರೆ ಅವರು ಬದುಕಿ ಉಳಿದಿಲ್ಲ. ಎರಡು ದಿನದ ನಂತರ ಮೃತರ ಮನೆಗೆ ಭೇಟಿ. ಅವರಿಗೆ ಸಾಂತ್ವನ ಹೇಳಿ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ. ಮೃತರ ಮನೆಗೆ ಭೇಟಿ‌ ನೀಡಿ ಸಾಂತ್ವನ ಹೇಳುವುದು ನನ್ನ ಕರ್ತವ್ಯ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ದರ ಏರಿಕೆ ಇಲ್ಲ ;ಕೊರೊನಾ ಸಂಕಷ್ಟ ಇರುವ ಕಾರಣದಿಂದ ರಾಜ್ಯದಲ್ಲಿ ಬಸ್‌ ದರ ಏರಿಕೆ ಮಾಡುವುದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರೂ ಆಗಿರುವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿದೆ. ಆದರೆ ಕೊರೊನಾ ಸಂಕಷ್ಟ ಇರುವ ಕಾರಣಕ್ಕಾಗಿ ಸದ್ಯಕ್ಕೆ ಬೆಲೆ ಏರಿಕೆಯ ಪ್ರಸ್ತಾಪ ಇಲ್ಲ. ಅಲ್ಲದೇ ಈಗಷ್ಟೇ ಅನ್‌ ಲಾಕ್ ಆಗಿದೆ. ಜನಕ್ಕೆ ಈಗಲೂ ಬಸ್‌ನಲ್ಲಿ ಪ್ರಯಾಣಿಸಿದರೆ ಕೊರೊನಾ ಬರುತ್ತೆ ಅನ್ನುವ ಭಯ ಇದೆ. ಜನರಿಗೂ ಲಾಕ್‌ ಡೌನ್‌ನಿಂದಾಗಿ ತೊಂದರೆ ಆಗಿದೆ. ಈ ಸಂದರ್ಭದಲ್ಲಿ ಟಿಕೆಟ್ ದರ ಏರಿಸಿದರೆ ಇನ್ನಷ್ಟು ಸಮಸ್ಯೆ ಆಗುತ್ತೆ. ಆದ್ದರಿಂದ ಬೆಲೆ ಏರಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದೇ ವೇಳೆ‌ ಸಾರಿಗೆ ನೌಕರರ ಮುಷ್ಕರ ವಿಚಾರದ ಕುರಿತಂತೆ ಮಾತನಾಡಿದ ಅವರು, ಸಾರಿಗೆ ನೌಕರರು ಈ ಹಿಂದೆ 9 ಬೇಡಿಕೆ ಮುಂದಿಟ್ಟಿದ್ದರು. ಇದರಲ್ಲಿ 8 ಬೇಡಿಕೆ ಈಡೇರಿಸಿದ್ದು, ವೇತನ ಪರಿಷ್ಕರಣೆ ಮಾಡಬೇಕು ಅಂತ ಕೇಳುತ್ತಿದ್ದಾರೆ. ಆದರೆ ಲಾಕ್‌ ಡೌನ್‌ನಿಂದಾಗಿ ನಿಗಮಕ್ಕೆ 4000 ಕೋಟಿ ರೂ. ನಷ್ಟ ಆಗಿದೆ‌. ಈಗ ಬರುತ್ತಿರುವ ಆದಾಯ ಇಂಧನಕ್ಕೂ ಸಾಲುತ್ತಿಲ್ಲ. ನಿಗಮಕ್ಕೆ ಆದಾಯ ಬರಲು ಶುರುವಾದ ನಂತರ ವೇತನ ಪರಿಷ್ಕರಣೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು. ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾಯಕತ್ವ ಬದಲಾವಣೆ ಎಂಬುದು ಕೆಲವು ಶಾಸಕರ ವೈಯಕ್ತಿಕ ಅಭಿಪ್ರಾಯ ಅಷ್ಟೇ. ಆದರೆ ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೂ ಕೆಲವು ನಾಯಕರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಅಲ್ಲ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು