ಚಾಮರಾಜನಗರ: ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಸುವ ನಾಟಕವಾಡಿ ವಿವಾಹವಾಗುವುದಾಗಿ ಪುಸಲಾಯಿಸಿ ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸಂಜಯ್(22) ಹಾಗೂ ಸುಜಿತ್(22) ಬಂಧಿತರು. ಇವರು 17 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 10ರಂದು ಬಾಲಕಿಯ ತಂದೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ನಡೆಸಿದ ಕೊಳ್ಳೇಗಾಲ ಪೊಲೀಸರು ಮಡಿಕೇರಿಯ ಬಳಿಯಿದ್ದ ಬಾಲಕಿಯನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ. ಅಲ್ಲದೆ ಆಕೆಯ ಜೊತೆಯಲ್ಲಿದ್ದ ಸಂಜಯ್ ಎಂಬಾತನನ್ನು ಠಾಣೆಗೆ ಕರೆತಂದು ವಿಚಾರಣೆಗೆ ನಡೆಸಿದಾಗ ನಾನು ಬಾಲಕಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗುವುದಾಗಿ ಹೇಳಿ ಅಪರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ಅಪಹರಣಕ್ಕೆ ತನ್ನ ಸ್ನೇಹಿತ ಸುಜಿತ್ ಸಹಕರಿಸಿರುವುದಾಗಿ ಹೇಳಿದ್ದಾನೆ.
ಹೀಗಾಗಿ ಇಬ್ಬರ ವಿರುದ್ಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಈಗ ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿರಿಸಲಾಗಿದೆ.