Categories: ಕರ್ನಾಟಕ

ಅಪ್ರಾಪ್ತ ಬಾಲಕಿ ಅಪಹರಿಸಿದ್ದವರ ಬಂಧನ

ಚಾಮರಾಜನಗರ: ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಸುವ ನಾಟಕವಾಡಿ ವಿವಾಹವಾಗುವುದಾಗಿ ಪುಸಲಾಯಿಸಿ ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸಂಜಯ್(22) ಹಾಗೂ ಸುಜಿತ್(22) ಬಂಧಿತರು. ಇವರು 17 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅಪಹರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 10ರಂದು ಬಾಲಕಿಯ ತಂದೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ ಕೊಳ್ಳೇಗಾಲ ಪೊಲೀಸರು  ಮಡಿಕೇರಿಯ ಬಳಿಯಿದ್ದ ಬಾಲಕಿಯನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ. ಅಲ್ಲದೆ ಆಕೆಯ ಜೊತೆಯಲ್ಲಿದ್ದ ಸಂಜಯ್ ಎಂಬಾತನನ್ನು ಠಾಣೆಗೆ ಕರೆತಂದು ವಿಚಾರಣೆಗೆ ನಡೆಸಿದಾಗ ನಾನು ಬಾಲಕಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗುವುದಾಗಿ ಹೇಳಿ ಅಪರಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ಅಪಹರಣಕ್ಕೆ ತನ್ನ ಸ್ನೇಹಿತ ಸುಜಿತ್ ಸಹಕರಿಸಿರುವುದಾಗಿ ಹೇಳಿದ್ದಾನೆ.

ಹೀಗಾಗಿ ಇಬ್ಬರ ವಿರುದ್ಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಈಗ ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿರಿಸಲಾಗಿದೆ.

Desk

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

11 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

25 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

49 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago