ಬೆಂಗಳೂರು ; ತಾಲಿಬಾನ್ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಹಿರಿಯ ಐಪಿಎಸ್ ಅಧಿಕಾರಿಯನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭಿಸಲಾಗಿದೆ.ಇದರ ಬೆನ್ನಲ್ಲೇ ಅಫ್ಘನ್ನಲ್ಲಿರುವ ಕನ್ನಡಿಗರನ್ನ ಕರೆತರುವ ಜವಾಬ್ದಾರಿ ಉಮೇಶ್ ಕುಮಾರ್ ಹೆಗಲಿಗೆ ಏರಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರನ್ನು ಈಗಾಗಲೇ ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ
ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.