Categories: ಕರ್ನಾಟಕ

ಅಫ್ಘಾನಿಸ್ಥಾನದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮೈಸೂರು ವಿವಿ ಕುಲಪತಿ

ಮೈಸೂರು; ಅಪ್ಘಾನಿಸ್ತಾನಕ್ಕೂ ಮೈಸೂರಿಗೆ ಒಂದು ರೀತಿಯ ನಂಟಿದೆ. ಅದು ಹೇಗೆಂದರೆ ಹತ್ತಾರು ವರ್ಷಗಳಿಂದ ಅಪ್ಘಾನಿಸ್ತಾನದಿಂದ ಬರುವ ನೂರಾರು ವಿದ್ಯಾರ್ಥಿಗಳು ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡಿ ಹೋಗುತ್ತಾರೆ. ಮೈಸೂರು ಸೇಫ್ ಸಿಟಿ ಹಾಗೂ ಸಂಸ್ಕ್ರತಿಗೆ ಹೆಸರಾದ ನಗರವಾದ ಕಾರಣ ಇಡೀ ಭಾರತದಲ್ಲಿ ಅಷ್ಟೊಂದು ವಿಶ್ವವಿದ್ಯಾನಿಲಯಗಳಿದ್ದರೂ, ವ್ಯಾಸಂಗಕ್ಕೆ ಆಪ್ಘಾನ್ ವಿದ್ಯಾರ್ಥಿಗಳು ಮೈಸೂರನ್ನೆ ಆಯ್ಕೆ ಮಾಡಿಕೊಳ್ಳುತ್ತಾರೆ.
ಅಪ್ಘಾನಿಸ್ತಾನದಲ್ಲಿ ಈಗ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ಕಾರಣ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 90 ಆಪ್ಘಾನ್ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅಪ್ಘಾನಿಸ್ತಾನದಲ್ಲಿರುವ ತಮ್ಮ ಕುಟುಂಬಸ್ಥರಿಗೇನು ತೊಂದರೆ ಆಗುತ್ತೊ ಅಂತ ದುಃಖಿತರಾಗಿದ್ದಾರೆ. ಸದ್ಯ ತಮ್ಮ ತಾಯ್ನಾಡಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಕಾರಣ ಮೈಸೂರಿನಲ್ಲೆ ಸ್ವಲ್ಪ ದಿನ ನೆಲೆಸಲು ವೀಸಾ ಅವಧಿ ವಿಸ್ತರಣೆಗೆ ಭಾರತ ಸರ್ಕಾರದ ಬಳಿ ಮನವಿ ಮಾಡಿದ್ದಾರೆ.

Indresh KC

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

6 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

19 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

34 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

55 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago