News Karnataka Kannada
Sunday, May 05 2024
ಕರ್ನಾಟಕ

ಅಫ್ಘಾನಿಸ್ಥಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

Araga Jnanendra.
Photo Credit :

ಬೆಂಗಳೂರು, ; ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಗಮನಕ್ಕೂ ತರಲಾಗುವುದು.
ಮೈಸೂರಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆಯನ್ನು ಕುಲಪತಿಗಳ ಗಮನಕ್ಕೆ ತಂದಿರುವ ವಿಷಯವನ್ನು ಗಮನಿಸಿದ್ದೇನೆ. ಈ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಮಾನವೀಯ ನೆಲೆಯಲ್ಲಿ ರಕ್ಷಣೆ ಕೊಡುವ ಪ್ರಯತ್ನ ಮಾಡಲಾಗುವುದು ಎಂದರು.ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾತ್ಕರ್ ವರದಿ ಅನುಷ್ಠಾನಕ್ಕೆ ಸಂಬಂಸಿದಂತೆ ನಮ್ಮ ಇಲಾಖೆ ತೆರೆದ ಮನಸ್ಸಿನಿಂದ ಇದೆ. ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸುವ ಭರವಸೆ ನೀಡಿದರು. ಸಂಚಾರಿ ನಿಯಮ ಉಲ್ಲಂಘನೆಗೆ ಸಂಬಂಸಿದಂತೆ ಅನೇಕ ತೊಡಕುಗಳು ಇದ್ದು, ಸರಳೀಕರಣಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು