News Karnataka Kannada
Tuesday, April 30 2024
ಕರ್ನಾಟಕ

ಅವನಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

Heavy rains disrupt normal life in Hubballi
Photo Credit :

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅವನಿ ಚಂಡಮಾರುತದ ಪರಿಣಾಮ ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗುವುದಾಗಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೀನುಗಾರರಿಗೆ ಮುಂದಿನ 24 ಗಂಟೆ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲವಾದರೂ, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯಿಂದಲೇ ಮಳೆಯಾಗುತ್ತಿದೆ. ಬೇಸಿಗೆಯಲ್ಲಿ ಮಳೆ ಬಂದಿರುವುದಕ್ಕೆ ಜನರು ಮತ್ತು ರೈತಾಪಿ ವರ್ಗ ಸಂತಸಗೊಂಡಿದ್ದಾರೆ.

ಆದರೆ ವಿವಿಧ ಕಡೆಗಳಲ್ಲಿ ಗಾಳಿಯ ಅಬ್ಬರಕ್ಕೆ ಮನೆ, ಕಟ್ಟಡಗಳ ಚಾವಣಿಗೆ ಹಾನಿಯಾಗಿದ್ದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಅಡಕೆ, ತೆಂಗು ಬೆಳೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು