News Karnataka Kannada
Friday, May 03 2024
ಕರ್ನಾಟಕ

ಅಶ್ಲೀಲ ಪದ ಬಳಕೆಗೆ ಕ್ಷಮೆ ಕೋರಿದ ಸಚಿವ ಈಶ್ವರಪ್ಪ

K S Eshwarappa
Photo Credit :

ಬೆಳಗಾವಿ: ನಾನು ಆ ಪದ ಬಳಸಬಾರದಿತ್ತು, ಆದರೆ ಬಳಸಿದ್ದೇನೆ. ಅದು ತಪ್ಪು, ಈ ಕುರಿತು ಕ್ಷಮೆಯನ್ನು ಯಾಚಿಸಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಕಾಂಗ್ರೆಸ್‍ನವರ ವಿರುದ್ಧ ಅಶ್ಲೀಲ ಶಬ್ದ ಬಳಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪು. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ಹಿಂಪಡೆದುಕೊಂಡಿದ್ದೇನೆ. ಆದರೆ ಸುಲಭ್ ಶೌಚಾಲಯಕ್ಕೆ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಹೇಳಿದನ್ನು ಕಾಂಗ್ರೆಸ್ ಅವರು ಒಪ್ಪುತ್ತಾರಾ? ಕಾಂಗ್ರೆಸ್ ಅವರು ರಾಜಕಾರಣ ಮಾಡಲು ಕಾಯುತ್ತಿದ್ದಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.
ಅವಾಚ್ಯ ಪದ ಬಳಕೆಗೆ ಕ್ಷಮೆ ಯಾಚಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಬಾರಿ ಆಯಿತಲ್ಲ. ಬೆಳಗ್ಗೆಯಿಂದ ಸಂಜೆಯವರೆಗೂ ಅದೇ ಮಾಡಬೇಕಾ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು