News Karnataka Kannada
Sunday, May 12 2024
ಕರ್ನಾಟಕ

ಅ.17ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Delhi Rain 7 7 21
Photo Credit :

ಕಳೆದ ನಾಲ್ಕೈದು ದಿನದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಅಕ್ಟೋಬರ್ 17 ರಂದು ಕೂಡ ದಕ್ಷಿಣ ಒಳನಾಡಿನಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ,ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು