Categories: ಕರ್ನಾಟಕ

ಅ.17ರಿಂದ ಭಕ್ತರಿಗೆ ಶ್ರೀ ಹಾಸನಾಂಬ ದೇವಿ ದರ್ಶನದ ಭಾಗ್ಯ

ಹಾಸನ: ಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿ ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ನಗರದ ಶ್ರೀ ಹಾಸನಾಂಬ ದೇವಿಯ ದರ್ಶನ ಮಹೋತ್ಸವ ಈ ಬಾರಿ ಅಕ್ಟೋಬರ್ 17ರಿಂದ 29ರವರೆಗೆ ಒಟ್ಟು 13 ದಿನಗಳ ಕಾಲ ನಡೆಯಲಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಮಾಹಿತಿ ನೀಡಿದ್ದು, ಅ. 17ರಂದು ಮಧ್ಯಾಹ್ನ 12.30ಕ್ಕೆ ಬಾಗಿಲು ತೆರೆಯಲಿದ್ದು, ಅ. 29 ರಂದು ಮಧ್ಯಾಹ್ನ 12 ಗಂಟೆ ನಂತರ ಬಾಗಿಲು ಮುಚ್ಚಲಾಗುವುದಾಗಿ ತಿಳಿಸಿದ ಅವರು, ಆದರೆ ಮೊದಲ ದಿನವಾದ ಅ.17 ಮತ್ತು ಕೊನೆಯ ದಿನವಾದ ಅ.29 ರಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರತಿವರ್ಷ ಅಶ್ವಯುಜ ಮಾಸದ ಹುಣ್ಣಿಮೆಯ ನಂತರದಲ್ಲಿ ಬರುವ ಮೊದಲ ಗುರುವಾರದಂದು ಬಾಗಿಲು ತೆರೆದು ಬಲಿಪಾಡ್ಯಮಿ ಹಬ್ಬದ ಮಾರನೇ ದಿನ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಸಾರ್ವಜನಿಕರಿಗೆ ಅ.18ರಿಂದ ಪ್ರತಿದಿನ ದೇವಿಗೆ ನೈವೇದ್ಯ ಪೂಜಾ ಸಮಯ ಅಪರಾಹ್ನ 1 ರಿಂದ 3 ಗಂಟೆಯವರೆಗೆ ಭಕ್ತಾಧಿಗಳಿಗೆ ದರ್ಶನ ಇರುವುದಿಲ್ಲ. ಉಳಿದ ಅವಧಿಯಲ್ಲಿ ರಾತ್ರಿ 11 ಗಂಟೆಯವರೆಗೆ ದರ್ಶನವಿರುತ್ತದೆ. ಅ.23, 25 ಮತ್ತು ಅ.27 ರ ದಿನಾಂಕಗಳಂದು ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ದೇವಿಗೆ ವಿಶೇಷ ನೈವೇದ್ಯ ಮತ್ತು ಪೂಜೆ ನಡೆಯಲಿದೆ ಎಂದಿದ್ದಾರೆ.

ಈಗಾಗಲೇ ಪೂರ್ವಸಿದ್ಧತೆಗಳಾದ ದೇವಾಲಯದ ಸಂಪರ್ಕ ರಸ್ತೆ ರಿಪೇರಿ, ಪೊಲೀಸ್ ಬಂದೋಬಸ್ತ್, ಬ್ಯಾರಿಕೇಡ್ ಅಳವಡಿಕೆ, ಆರೋಗ್ಯ, ಸ್ವಚ್ಛತೆ, ನೈರ್ಮಲ್ಯ, ಶೌಚಾಲಯ ಇತರೆ ವ್ಯವಸ್ಥೆಗಳ ಬಗ್ಗೆ ತಯಾರಿ ಮಾಡಿಕೊಳ್ಳಲಾಗಿದೆ. ಸರದಿ ಸಾಲಿನಲ್ಲಿ ಬರುವ ಭಕ್ತಾದಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ದೇವಸ್ಥಾನದ ಮುಂಬಾಗಿಲು ಪ್ರವೇಶದ್ವಾರದ ಹತ್ತಿರ, ದೇವಸ್ಥಾನದ ಹಿಂಭಾಗ ವಿಶೇಷ ದರ್ಶನದ ಪಡೆಯುವ ಸ್ಥಳದಲ್ಲಿ ಹಾಗೂ ಟಿಕೆಟ್ ಕೌಂಟರ್ ಬಳಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವುದರಿಂದ ಧರ್ಮದರ್ಶನ, ಶೀಘ್ರವಾಗಿ ಹಾಗೂ ಸುಗಮ ದರ್ಶನಕ್ಕಾಗಿ ರೂ.300ರ ವಿಶೇಷ ದರ್ಶನ ಟಿಕೆಟ್ ಪಡೆದವರಿಗೆ 2 ಲಾಡು, 1000 ರೂ.ಗಳ ನೇರದರ್ಶನ ವಿಶೇಷ ದರ್ಶನ ಟಿಕೆಟ್ ಪಡೆದವರಿಗೆ 4 ಲಾಡು ಪ್ರಸಾದವನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ.

ಭಕ್ತಾದಿಗಳ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಎಲ್.ಇ.ಡಿ. ಸ್ಕ್ರೀನ್ ಟಿ.ವಿ. ವ್ಯವಸ್ಥೆ ದೇವಸ್ಥಾನದ ಆಯಾಕಟ್ಟಿನ ಜಾಗದಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗುತ್ತದೆ. ಭಕ್ತಾದಿಗಳ ವಾಹನ ನಿಲುಗಡೆಗಾಗಿ ಪಾರ್ಕಿಂಗ್ ವ್ಯವಸ್ಥೆಯನ್ನು ಹಾಸನ ನಗರಸಭೆ ಆವರಣದ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ.

ದೇವಾಲಯದ ಬಾಗಿಲು ತೆರೆಯುವ ದಿನ ಜಿಲ್ಲೆಯ ವಿವಿಧ ಪ್ರಕಾರಗಳ ಕಲಾ ತಂಡಗಳನ್ನು ಕರೆಸಿ ಸಾಂಪ್ರಾದಾಯಿಕ ಮೆರವಣಿಗೆ ಉತ್ಸವ ನಡೆಸಲಾಗುವುದು. ದೇವಾಲಯದ ಮುಚ್ಚುವ ದಿನವೂ ಮಧ್ಯಾಹ್ನ 2 ಗಂಟೆಯಿಂದ ರಾತ್ರಿಯವರೆಗೆ ವಿವಿಧ ಪ್ರಕಾರದ ಕಲಾವಿದರಿಂದ ಹಾಸನಾಂಭ ಕಲಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Desk

Recent Posts

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

6 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

11 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

21 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

27 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

47 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

49 mins ago