News Karnataka Kannada
Friday, May 03 2024
ಕರ್ನಾಟಕ

ಆಗಸ್ಟ್​ 24ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆ

Heavy rains disrupt normal life in Hubballi
Photo Credit :

ಕರ್ನಾಟಕ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಆಗಸ್ಟ್​ 24ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್​ 23 ಮತ್ತು 24ರಂದು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣ ತನ್ನ ಆರ್ಭಟ ತೋರಿಸಲಿದ್ದಾನೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ 9 ಜಿಲ್ಲೆಗಳಲ್ಲಿ ಆಗಸ್ಟ್​ 24ರವರೆಗೆ ಅಧಿಕ ಮಳೆಯಾಗಲಿದ್ದು, ಇನ್ನೆರಡು ದಿನ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು