Categories: ಕರ್ನಾಟಕ

ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ

ಮಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ  ಶರಣಾಗಿರುವ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಈ ದಂಪತಿಗಳ ಸಾವಿನ ನಂತರ ಕೋವಿಡ್‌ ಪರೀಕ್ಷೆ ಮಾಡಿದಾಗ ನೆಗೆಟಿವ್‌ ರಿಪೋರ್ಟ್‌ ಬಂದಿದೆ. ಈ ಕುರಿತು   ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಡೆತ್ ನೋಟಲ್ಲಿ ನಮಗೆ ಕೊರೊನಾ ಇದೆ, ಬ್ಲ್ಯಾಕ್ ಫಂಗಸ್ ಬಂದರೆ ಸಮಸ್ಯೆ ಎಂದು ಬರೆದಿದ್ದಾರೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಸೋಂಕು ಇರಲಿಲ್ಲ ಎಂದರು.
ಆತ್ಮಹತ್ಯೆಗೆ ಶರಣಾಗಿದ್ದ ದಂಪತಿಯ ಮೃತದೇಹವನ್ನು ಟೆಸ್ಟ್ ಮಾಡಿದ ಬಳಿಕ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಪೋಸ್ಟ್ ಮಾರ್ಟಮ್​ಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ರಿಪೋರ್ಟ್ ನೆಗೆಟಿವ್ ಎಂದು ತಿಳಿದು ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹವನ್ನು ಪೋಸ್ಟ್‌ ಮಾರ್ಟಮ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊರೊನಾ ಭಯದಿಂದ ನಾನು ಮತ್ತು ನನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬೆಳಗ್ಗೆ 6.40ರ ಹೊತ್ತಿಗೆ ಕಮಿಷನರ್​ಗೆ ವಾಟ್ಸಾಪ್ ಮೆಸೇಜ್ ಮತ್ತು ಕಾಲ್ ಬಂದಿದೆ. ಈ ವೇಳೆ ತಕ್ಷಣ ಕಮಿಷನರ್ ಕಾಲ್ ಮಾಡಿದ್ರೂ ಅವರು ಎತ್ತಲಿಲ್ಲ. ವಾಯ್ಸ್ ಮೆಸೇಜ್ ಮಾಡಿ ಧೈರ್ಯ ತುಂಬಿದ್ರೂ ರಿಪ್ಲೈ ಮಾಡಿಲ್ಲ. ನಂತರ ಲೊಕೇಶನ್ ಟ್ರೇಸ್ ಮಾಡಿ, ಪೊಲೀಸ್ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಡಿಸಿಪಿ ಹರಿರಾಂ ಶಂಕರ್ ಮಾಹಿತಿ ನೀಡಿದರು. ಅವರೇ ಸ್ವಂತ ನಿರ್ಧಾರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಸಲ ಮಗು ಪಡೆಯಲು ಯತ್ನಿಸಿ ವಿಫಲರಾಗಿದ್ದು, ಇದರ ಖಿನ್ನತೆ ಇರಬಹುದು. ಆದರೆ ಇವರು ಯಾರ ಜೊತೆಗೂ ಹೆಚ್ಚಾಗಿ ಬೆರೆತ ಬಗ್ಗೆ ಮಾಹಿತಿಯಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.
ಈ ಆತ್ಮಹತ್ಯೆ ಪ್ರಕರಣಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ನೋವಿನ ಸಂಗತಿಯಾಗಿದೆ. ಕೊರೊನಾ ಸೋಂಕು ಬಂದ ಕೂಡಲೇ ಯಾರೂ ಸಾಯಲ್ಲ. ಕೊರೊನಾ ಲಕ್ಷಣ ಕಂಡುಬಂದರೆ ತಪಾಸಣೆ ಮಾಡಿಸಿಕೊಳ್ಳಿ. ಆರೋಗ್ಯ ಇಲಾಖೆ, ವೈದ್ಯರು ನಿಮ್ಮ ಜೊತೆ ಇರುತ್ತಾರೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago