ಬೆಂಗಳೂರು, ;ಪ್ರವಾಸೋದ್ಯಮ ಸಚಿವ ಆನಂದ್ಸಿಂಗ್ ಅಧಿಕಾರ ಸ್ವೀಕಾರ ಮಾಡಿದ್ದು ಯಾವುದೇ ಅಸಮಾಧಾನ ಹೊಂದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ಸಿಂಗ್ ಅವರೊಂದಿಗೆ ಮುಖ್ಯಮಂತ್ರಿ ಹಾಗೂ ತಾವು ಮಾತನಾಡಿದ್ದು, ಎಲ್ಲವೂ ಬಗೆಹರಿದಿದೆ. ಸದ್ಯಕ್ಕೆ ಯಾವುದೇ ಗೊಂದಲವಿಲ್ಲ, ಅಸಮಧಾನವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳುತ್ತಿದ್ದು, ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ಮಾಡಿ ಬರುತ್ತಾರೆ. ಹೀಗಾಗಿ ಆನಂದ್ಸಿಂಗ್ ಅವರು ಸಂತೋಷದಿಂದಲೇ ಅಧಿಕಾರ ಸ್ವೀಕರಿಸಿದ್ದಾರೆ ಎಂದರು.
ಆನಂದ್ಸಿಂಗ್ ಅಧಿಕಾರ ಸ್ವೀಕರಿಸಿದ್ದಾರೆ, ಎಲ್ಲವೂ ಬಗೆಹರಿದಿದೆ : ಆರ್.ಅಶೋಕ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.