ಕರ್ನಾಟಕ

ಆಫ್ಘಾನಿಸ್ತಾನದ ಪ್ರಭಾವಿ ಧರ್ಮಗುರುವನ್ನು ಬಂಧಿಸಿದ ತಾಲಿಬಾನಿಗಳು

ಕಾಬೂಲ್ ;ಆಫ್ಘಾನಿಸ್ತಾನದ ಪ್ರಭಾವಿ ಧರ್ಮಗುರು ಮೌಲ್ವಿ ಮೊಹಮ್ಮದ್ ಸರ್ದಾರ್ ಜರ್ಧಾನ್ ಅವರನ್ನು ಬಂಧಿಸಿರುವುದಾಗಿ ತಾಲಿಬಾನಿಗಳು ಸ್ಪಷ್ಟಪಡಿಸಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ಅಸಹಾಯಕ ಸ್ಥಿತಿಯಲ್ಲಿ ಕೂರಿಸಿರುವ ಮೌಲ್ವಿ ಅವರ ಭಾವಚಿತ್ರವನ್ನು ತಾಲಿಬಾನಿಗಳು ಬಿಡುಗಡೆ ಮಾಡಿದ್ದಾರೆ.
ಈ ಮೊದಲು ಬಾಲ್ಕ್ ಪ್ರಾಂತ್ಯದ ಮಹಿಳಾ ರಾಜ್ಯಪಾಲರಾದ ಸಲಿಮಾ ಮೊರ್ಜಾರಿ ಅವರನ್ನು ತಾಲಿಬಾನಿಗಳು ಬಂಧಿಸಿದ್ದರು. ಆಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ಬಹಳಷ್ಟು ನಾಯಕರ ದೇಶ ಬಿಟ್ಟು ಪಲಾಯನವಾಗಿದ್ದಾರೆ. ಕೆಲವರು ದೇಶದಲ್ಲೇ ಉಳಿದುಕೊಂಡು ಶರಣಾಗತರಾಗಿದ್ದಾರೆ. ಇನ್ನು ಕೆಲವರು ಪ್ರತಿಭಟನಾರ್ತಕವಾಗಿ ತಿರುಗಿ ಬಿದ್ದಿದ್ದಾರೆ. ಅದರಲ್ಲಿ ಸಲಿಮಾ ಮೊರ್ಜಾರಿ ಪ್ರಮುಖರು. ಆಕೆಯ ಬಂಧನವಾಗುವವರೆಗೂ ಬಾಲ್ಕ್ ಪ್ರಾಂತ್ಯದ ಚಹಾರ್ ಜಿಲ್ಲೆಯನ್ನು ತಾಲಿಬಾನ್‍ಗಳ ವಶಕ್ಕೆ ಅವಕಾಶ ಕೊಟ್ಟಿರಲಿಲ್ಲ. ಧರ್ಮನಿಷ್ಟರೆಂದು ಹೇಳಲಾದ ತಾಲಿಬಾನಿಗಳು ಧರ್ಮಗುರುವನ್ನು ಬಂಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

Indresh KC

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

22 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

31 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

42 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago