Categories: ಕರ್ನಾಟಕ

ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

ಮೈಸೂರು, : ಮಹಾಮಾರಿ ಕೋವಿಡ್- 19 ಸೋಂಕು ಆತಂಕದ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊರೊನಾ ಅನ್‌ಲಾಕ್ ಹಿನ್ನೆಲೆಯಲ್ಲಿ ಜು.5ರಿಂದ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಸೋಮವಾರ ಚಾಮುಂಡಿ ಬೆಟ್ಟಕ್ಕೆ ನೂರಾರು ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದರು. ಆದರೆ ಆಷಾಢ ಶುಕ್ರವಾರಗಳಂದು ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ಕಾರಣದಿಂದ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ‌ ಸೋಂಕು ಭೀತಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದ್ದು, ಚಾಮುಂಡಿ ಬೆಟ್ಟ ಮಾತ್ರವಲ್ಲದೇ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಾಲಯಕ್ಕೂ ಸಹ ಭಕ್ತರು ಭೇಟಿ ನೀಡದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಮೈಸೂರು ಜಿಲ್ಲಾಡಳಿತ ಆದೇಶದನ್ವಯ ನಾಲ್ಕು ಆಷಾಢ ಶುಕ್ರವಾರ ಮತ್ತು ಎರಡು ದಿನಗಳ ಅಮಾವಾಸ್ಯೆಯಂದು ನಿರ್ಬಂಧ ಹೇರಲಾಗಿದೆ. ಅಲ್ಲದೇ ಆಷಾಢ ಮಾಸದ ಶನಿವಾರ, ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದು ಸಹ ನಿರ್ಬಂಧ ಮುಂದುವರಿಯಲಿದೆ. ಜಿಲ್ಲಾಡಳಿತದ ಈ ಆದೇಶದ ಹಿನ್ನೆಲೆಯಲ್ಲಿ ಜು.೬ ರಿಂದ ಪ್ರತಿದಿನ ಸಂಜೆ 6 ಗಂಟೆ ನಂತರ ನಿರ್ಬಂಧ ವಿಧಿಸಲಾಗಿದೆ.
ಯಾವ ದಿನಗಳಂದು ನಿರ್ಬಂಧ
* ಜುಲೈ 09, 2021 ಆಷಾಢ ಅಮಾವಾಸ್ಯೆ
* ಜುಲೈ 16, 2021 ಮೊದಲನೇ ಆಷಾಢ ಶುಕ್ರವಾರ
* ಜುಲೈ 23, 2021 2ನೇ ಆಷಾಢ ಶುಕ್ರವಾರ
* ಜುಲೈ 30, 2021 3ನೇ ಆಷಾಢ ಶುಕ್ರವಾರ ಹಾಗೂ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ
* ಆಗಸ್ಟ್ 06, 2021 4ನೇ ಆಷಾಢ ಶುಕ್ರವಾರ
* ಆಗಸ್ಟ್ 08, 2021 ಭೀಮನ ಆಮಾವಾಸ್ಯೆ ದಿನ ನಿರ್ಬಂಧ ಹೇರಲಾಗಿದೆ.

 

Indresh KC

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

19 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

32 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

52 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

60 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago