News Karnataka Kannada
Friday, May 03 2024
ಕರ್ನಾಟಕ

ಇಂದು ಕೋವಿಡ್ ಲಸಿಕಾ ಮೇಳ: 34 ಲಕ್ಷ ಡೋಸ್ ಗುರಿ

Covid Vaccine
Photo Credit :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕಾ ಮೇಳವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದು, ಒಂದೇ ದಿನ 34 ಲಕ್ಷ ಡೋಸ್ ಲಸಿಕೆ ವಿತರಿಸುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ.

ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಲಸಿಕೆ ಒದಗಿಸಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಲಸಿಕೆ ವಿತರಿಸಲು ಯೋಜನೆ ರೂಪಿಸಲಾಗಿದೆ. 12,700 ಸರ್ಕಾರಿ ಕೇಂದ್ರಗಳು ಹಾಗೂ 300 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ.

‘ದೇಶದಲ್ಲಿ ಉತ್ತರ ‍ಪ್ರದೇಶದ ಬಳಿಕ ಅತೀ ಹೆಚ್ಚು ಡೋಸ್‌ ನೀಡಿದ ರಾಜ್ಯ ಕರ್ನಾಟಕ. ಆಗಸ್ಟ್ ತಿಂಗಳಲ್ಲಿ 1.10 ಕೋಟಿ ಡೋಸ್‌ಗಳು ಲಸಿಕೆಯನ್ನು ನೀಡಲಾಗಿದೆ. ನವೆಂಬರ್ ಅಂತ್ಯಕ್ಕೆ ರಾಜ್ಯದ‌ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ ಲಸಿಕೆ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಾರದಲ್ಲಿ ಬುಧವಾರ 15 ಲಕ್ಷ ಡೋಸ್‌ಗಳು ಹಾಗೂ ಉಳಿದ ದಿನ 5 ಲಕ್ಷ ಡೋಸ್‌ಗಳು ನೀಡುವ ಗುರಿಯಿದ್ದು, ಅಗತ್ಯತೆಗೆ ಅನುಗುಣವಾಗಿ ಲಸಿಕೆ ಪೂರೈಸಲು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಈವರೆಗೆ ಲಸಿಕೆಯ 4.84 ಕೋಟಿಗೂ ಅಧಿಕ ಡೋಸ್‌ಗಳನ್ನು ವಿತರಿಸಲಾಗಿದೆ. 3.56 ಕೋಟಿ ಮಂದಿ ಈವರೆಗೆ ಮೊದಲ ಡೋಸ್ ಹಾಗೂ 1.28 ಕೋಟಿ ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು