News Karnataka Kannada
Monday, May 06 2024
ಕರ್ನಾಟಕ

ಇಂದು ಮೂಡಿಗೆರೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

Photo Credit :

ಇಂದು ಮೂಡಿಗೆರೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಚಿಕ್ಕಮಗಳೂರು: ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ, ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿ ಕಲಾವಿದರಿಂದ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಇಂದು ಸಂಜೆ ಸರಿಯಾಗಿ 5.45 ಕ್ಕೆ ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುರೇಕಾ ಅಕಾಡೆಮಿಯ ಸಂಸ್ಥಾಪಕ ದೀಪಕ್ ದೊಡ್ಡಯ್ಯ ತಿಳಿಸಿದ್ದಾರೆ.

ಆಳ್ವಾಸ್ ವಿರಾಸತ್ ಮತ್ತು ನುಡಿಸಿರಿ ಕನ್ನಡ ನಾಡು-ನುಡಿ ರಾಷ್ಟ್ರೀಯ ಸಮ್ಮೇಳನವನ್ನು ಶಿಕ್ಷಣದ ಜೊತೆಗೆ ನಡೆಸಿಕೊಂಡು ಬರುತ್ತಿದೆ. ಹಲವು ತಾಲ್ಲೂಕು, ಜಿಲ್ಲೆ, ಹೊರರಾಜ್ಯ, ಹೊರರಾಷ್ಟ್ರಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡುತ್ತಾ ಬಂದಿದೆ ಕಾರ್ಯಕ್ರಮವನ್ನು ಶೃಂಗೇರಿ ಆದಿಚುಂಚನಗಿರಿ ಶಾಖಾಮಠದ ಶ್ರೀ ಶ್ರೀ ಶ್ರೀ ಗುಣನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ದೀಪಕ್ ದೊಡ್ಡಯ್ಯ ನಿರ್ವಹಿಸಲಿದ್ದು, ಶಾಸಕ ಬಿ.ಬಿ.ನಿಂಗಯ್ಯ, ಎಂಎಲ್ಸಿ ಡಾ. ಶ್ರೀಮತಿ ಮೋಟಮ್ಮ, ಎಂ.ಕೆ.ಪ್ರಾಣೇಶ್, ಜಿಲ್ಲಧಿಕಾರಿ ಎಂ.ಕೆ.ಶ್ರೀರಂಗಯ್ಯ, ಎಸ್ಪಿ ಕೆ.ಅಣ್ಣಾಮಲೈ, ತಾಪಂ ಅಧ್ಯಕ್ಷ ಕೆ.ಸಿ.ರತನ್, ಪಪಂ ಅಧ್ಯಕ್ಷೆ ಶ್ರೀಮತಿ ರಮಿಜಾಬಿ ಜಿ ಪಂ ಸದಸ್ಯೆ ಶ್ರೀಮತಿ ಸುಧಾ ಯೋಗೀಶ್ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವಾ ಆಗಮಿಸಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
179

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು