Categories: ಕರ್ನಾಟಕ

ಇ ವಿಧಾನ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲ

ಬೆಂಗಳೂರು, ; ರಾಜ್ಯ ವಿಧಾನ ಮಂಡಲವನ್ನು ಕಾಗದ ರಹಿತಗೊಳಿಸುವ ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ಬಹುತೇಕ ವಿಫಲವಾಗಿದೆ. ಇತ್ತೀಚೆಗೆ ಇ-ವಿಧಾನ ಕಾರ್ಯರೂಪಕ್ಕೆ ಬರದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ಬೇಸರ ವ್ಯಕ್ತಪಡಿಸಿದ್ದರು. 2014ರಲ್ಲಿ ರಾಜ್ಯದ ವಿಧಾನಮಂಡಲವನ್ನು ಕಾಗದ ರಹಿತವಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯ ಆರಂಭವಾಗಿತ್ತು.
ಆ ವೇಳೆ ಹಿಮಾಚಲ ಪ್ರದೇಶ ವಿಧಾನಸಭೆ ಯನ್ನು ಡಿಜಿಟಲೀಕರಣ ಮಾಡಲಾಗಿತ್ತು. ಇದೇ ಮಾದರಿ ಯಲ್ಲಿ ರಾಜ್ಯ ವಿಧಾನಸಭೆ, ವಿಧಾನರಿಷತ್‍ನಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾಪ ಬಂದಿತ್ತು. ಈ ಸಂಬಂಧ ವಿಧಾನಸಭೆ ಸಚಿವಾಲಯದ ಉನ್ನತಾಧಿಕಾರಿಗಳು ಹಾಗೂ ಐಟಿ ತಜ್ಞರು 2015ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ ಅಧ್ಯಯನ ಕೈಗೊಂಡು ಬಂದಿದ್ದರು.ಬೆಳಗಾವಿ ಸುವರ್ಣಸೌಧ ಕಟ್ಟಡ ಸೇರಿ ಉಭಯ ಸದನಗಳನ್ನ ಇ-ವಿಧಾನ ಮಂಡಲವಾಗಿಸಲು ಸುಮಾರು 69 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ಒನ್ ನೇಷನ್ ಒನ್ ಅಪ್ಲಿಕೇಷನ್ ಹೆಸರಿನಡಿ ನ್ಯಾಷನಲ್ ಇ-ವಿಧಾನ್ ಅಪ್ಲಿಕೇಷನ್ ಸಿದ್ಧಪಡಿಸಿದೆ. ಇದರ ವೆಬ್‍ಸೈಟ್‍ಗೆ ಕರ್ನಾಟಕವೂ ಸೇರ್ಪಡೆಗೊಂಡಿದೆ.
ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್ (ನೆವ) ಇದರ ಅನುಷ್ಠಾನದ ಜವಾಬ್ದಾರಿ ಹೊಂದಿತ್ತು.ಕೇಂದ್ರ ಸರ್ಕಾರವೇ ಶೇ.60ರಷ್ಟು ವೆಚ್ಚ ಭರಿಸುವ ಹೊಣೆ ಹೊತ್ತಿತ್ತು. ಈ ಸಂಬಂಧ 2018ರಲ್ಲಿ ರಾಜ್ಯದ ಸಿಬ್ಬಂದಿಗೆ ತರಬೇತಿಯನ್ನು ನೀಡಲಾಗಿತ್ತು. ಆದರೆ ಇಷ್ಟು ವರ್ಷ ಕಳೆದರೂ ಶೀಘ್ರ ಯೋಜನೆ ಜಾರಿಗೆ ಬರುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago