ಮೈಸೂರು: ಕೋವಿಡ್ ಪ್ರಕರಣಗಳ ಹೆಚ್ಚಳ ಹಾಗೂ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಎಚ್.ಡಿ.ಕೋಟೆ ತಾಲ್ಲೂಕಿನ ಬಾವಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯಂತೆಯೇ ಈ ಸಲವೂ ಸರಳ ದಸರ ಆಚರಿಸಲಾಗುವುದು. ಈ ಸಂಬಂಧ ಮೈಸೂರು ಜಿಲ್ಲಾಡಳಿತ ಸಿದ್ಧಪಡಿಸುವ ರೂಪರೇಷೆಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು, ಕರ್ನಾಟಕದ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ನಡೆಯುತ್ತಿದೆ.