ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ಎಂಬಿಏ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.ಸ್ನೇಹಿತನ ಜೊತೆ ಚಾಮುಂಡಿಬೆಟ್ಟಕ್ಕೆ ವಿದ್ಯಾರ್ಥಿನಿ ತೆರಳಿದ ವೇಳೆ ಘಟನೆ ನಡೆದಿದ್ದು ನಾಲ್ವರು ಕಾಮುಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು.. ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ. ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಹೊರ ವಲಯದ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ನೋಡಿ ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಯುವತಿ ಹಾಗೂ ಆತನ ಪ್ರಿಯಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯುವತಿ ಉತ್ತರ ಪ್ರದೇಶ ಮೂಲದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಈ ಘಟನೆ ಸಂಬಂಧ 4-5 ಮಂದಿಯ ಮೇಲೆ ಎಫ್ ಐಆರ್ ದಾಖಲಾಗಿದೆ.
ಎಂಬಿಏ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.