ಕರ್ನಾಟಕ

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ; ಶೇಕಡಾ 99.9 ತೇರ್ಗಡೆ

ಬೆಂಗಳೂರು: ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇಂದು ನಿಗದಿಪಡಿಸಲಾದ ಸುದ್ದಿಗೋಷ್ಠಿಯ ಮೂಲಕ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಕೊರೊನಾ ನಡುವೆ ಪರೀಕ್ಷೆ ಸಂಘಟಿಸಿದ ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ನೂತನ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರದಲ್ಲಿ ಎಲ್ಲೂ ಮಾಡದ ಸಾಧನೆ ನಾವು ಮಾಡಿದ್ದೇವೆ. ಮಕ್ಕಳ ಭವಿಷ್ಯಕ್ಕೆ ಪರೀಕ್ಷೆ ಬೇಕು ಎಂದು ಪರೀಕ್ಷೆ ಸಂಘಟನೆ ಹಾಗೂ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ. ಸುಮಾರು 8 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆದಿದ್ದಾರೆ. ಹೆತ್ತವರು ಕೂಡ ಸಹಕರಿಸಿದ್ದಾರೆ. ಎಸ್​ಒಪಿ ಸಂಪೂರ್ಣ ಪಾಲಿಸಿ, ಕೊರೊನಾ ನಿಯಮಾವಳಿ ಧಕ್ಕೆ ಆಗದಂತೆ ಅಧಿಕಾರಿ ವರ್ಗ, ಶಿಕ್ಷಕರು ಸಹಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. sslc.Karnataka.gov.in ನಲ್ಲಿ ಎಸ್‌ಎಸ್ಎಲ್‌ಸಿ ರಿಸಲ್ಟ್ ಲಭ್ಯವಿದೆ. 4,70,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610, ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.
625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.
ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು, ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 6321 ಮಕ್ಕಳು, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 3,649 ಮಕ್ಕಳು, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ 9,367 ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆ.
ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಾಗಿತ್ತು. ಕಾರಣಾಂತರಗಳಿಂದ ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. 1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಆರಂಭದಲ್ಲಿ ಸ್ವಲ್ಪ ರಿಸ್ಕ್ ಇದ್ದರೂ ಅದನ್ನು ಎದುರಿಸುತ್ತೇವೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು. SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಫಲಿತಾಂಶವನ್ನು kseeb.kar.nic.in and karresults.nic.in ವೆಬ್‌ ಸೈಟ್‌ ಮೂಲಕ ನೋಡಬಹುದಾಗಿದೆ.

Indresh KC

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

23 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

38 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago