ಕರ್ನಾಟಕ

ಐದು ವರ್ಷ ಅವಕಾಶ ಕೊಟ್ಟು ನೋಡಿ ಎಂದು ಜನತೆಯ ಆಶೀರ್ವಾದ ಬಯಸಿದ ಹೆಚ್‌ಡಿ ಕುಮಾರ ಸ್ವಾಮಿ

ಗದಗ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಗದಗಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಪಕ್ಷಕ್ಕೆ ಇನ್ನು ಐದು ವರ್ಷ ಅಧಿಕಾರ ನೀಡುವಂತೆ ಜನತೆಯನ್ನು ಕೋರಿದರು.
ತಾನು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡುತ್ತಿದ್ದುದು ಎಲ್ಲರಿಗೂ ಗೊತ್ತಿರುವ ವಿಚಾರ. ಆಗಲೇ ಸುಗ್ನಳ್ಳಿ ಕೆರೆಯ ಅಭಿವೃದ್ಧಿಗೆ ಅನುದಾನ ಒದಗಿಸಿದ್ದೆ. ಈಗ ಕೆರೆ ಹೂಳೆತ್ತುವ ಮತ್ತು ಅಭಿವೃದ್ಧಿ ಸಂಬಂಧಿತ ಕೆಲಸಗಳಿಗೆ ಗುದ್ದಲಿ ಪೂಜೆ ಮಾಡುವ ಕಾರ್ಯಕ್ರಮಗೆ ನನಗೆ ಆಹ್ವಾನ ನೀಡಿದ್ದರು, ನಾನು ಅದಕ್ಕಾಗಿ ಬಂದಿದ್ದೆ. ಶಿರಹಟ್ಟಿಯ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಖುದ್ದು ಈ ಆಹ್ವಾನ ನೀಡಿದ್ದರು. ಉಸ್ತುವಾರಿ ಸಚಿವರಾದ ಸಿ ಸಿ ಪಾಟೀಲ್ ಜೊತೆಯೂ ತಾನು ಮಾತನಾಡಿದ ನಂತರವೇ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗಕ್ಕೆ ಆಗಮಿಸಿದ್ದೆ. ಆದರೆ ಅನಿರೀಕ್ಷಿತವಾಗಿ ನಿನ್ನೆ ರಾತ್ರಿ ಈ ಕಾರ್ಯಕ್ರಮ ರದ್ದಾಗಿದೆ.
ಹೀಗೆ ಧಿಡೀರನೆ ಕಾರ್ಯಕ್ರಮ ಯಾಕೆ ರದ್ದಾಗಿದೆ ಎಂದು ನನಗೂ ಗೊತ್ತಿಲ್ಲ, ಆದರೆ ಅಭಿವೃದ್ಧಿಯ ಕೆಲಸದಲ್ಲಿ ರಾಜಕೀಯ ಮಾಡಬೇಡಿ ಎಂದು ಜನಪ್ರತಿನಿಧಿಗಳಿಗೆ ಸಲಹೆ ನೀಡುತ್ತೇನೆ ಎಂದು ಎಚ್ಡಿಕೆ ಹೇಳಿದ್ರು. ಇದರೊಂದಿಗೆ ಜನ ತಮ್ಮನ್ನು ಯಾರು ಆಳಬೇಕು ಎನ್ನುವುದನ್ನು ಸರಿಯಾಗಿ ನಿರ್ಧರಿಸಬೇಕು ಎಂದು ಈ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ವಿವರವಾಗಿ ತಿಳಿಸಿದರು.

Indresh KC

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

3 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

15 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

18 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

25 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

29 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

36 mins ago