Categories: ಕರ್ನಾಟಕ

ಒಬಿಸಿ ಮೀಸಲಾತಿ ಮಸೂದೆ ; ರಾಜ್ಯಸಭೆಯಲ್ಲೂ ಮಸೂದೆ ಅಂಗೀಕಾರ

ನವದೆಹಲಿ: ನಿನ್ನೆ ಲೋಕಸಭೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಿದ್ದ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ರಾಜ್ಯಸಭಾ ಸದನದಲ್ಲಿ 187 ಮತಗಳ ಬೆಂಬಲದೊಂದಿಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಮೂರನೇ ಎರಡರಷ್ಟು ಬಹುಮತದೊಂದಿಗೆ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಎರಡೂ ಸದನಗಳಲ್ಲಿ ಒಬಿಸಿ ಸೇರ್ಪಡೆಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆ ಅಂಗೀಕಾರವಾದಂತಾಗಿದೆ.

ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು. ಈ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ ನಿನ್ನೆ ಲೋಕಸಭಾ ಕಲಾಪದಲ್ಲಿ ಚರ್ಚೆಗಳು ನಡೆದಿದ್ದು, ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿತ್ತು. ಇಂದು ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಿದ್ದು, ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಿವೆ.

Indresh KC

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

39 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago