News Karnataka Kannada
Saturday, May 11 2024
ಕರ್ನಾಟಕ

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

Photo Credit :

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

ಮಡಿಕೇರಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ.   

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸುವ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ರಾಜ್ಯೋತ್ಸವ ಆಚರಿಸಬೇಕಿದೆ. ಇದರೊಂದಿಗೆ ಶಿಷ್ಟಾಚಾರದ ಅನ್ವಯ ಕಾರ್ಯಕ್ರಮಗಳು ನಡೆಯಬೇಕು. ವ್ಯವಸ್ಥಿತ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ನಿಟ್ಟಿನಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಮಳೆ ಇದ್ದಲ್ಲಿ ನಗರದ ಕೋಟೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ಕಾರ್ಯನಿರ್ವಹಿಸಲಿದೆ. ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳನ್ನು ಸ್ವಾಗತಿಸಬೇಕು. ಇದರೊಂದಿಗೆ ವಿವಿಧ ಸಮಿತಿಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತಾ ಕಾರ್ಯ ಮಾಡಬೇಕು. ಸರಿಯಾದ ಕ್ರಮದಲ್ಲಿ ಶಾಮಿಯಾನದ ವ್ಯವಸ್ಥೆಯಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಡಿವೈಎಸ್‍ಪಿ ದಿನೇಶ್ ಕುಮಾರ್, ಪೊಲೀಸ್ ಇನ್ಸ್‍ಪೆಕ್ಟರ್ ರಾಚಯ್ಯ, ತಾ.ಪಂ.ಇಒ ಲಕ್ಷ್ಮೀ, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಪೌರಾಯುಕ್ತರಾದ ರಾಮದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಹಾಲಿಂಗಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ, ಕಾರ್ಮಿಕ ಇಲಾಖೆ ಅಧಿಕಾರಿ ಅನಿಲ್ ಭಗಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ದೇವಕಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು