Categories: ಕರ್ನಾಟಕ

ಕಪ್ಪು ಶಿಲೀಂಧ್ರ ಸೋಂಕು: ರಾಜ್ಯದಲ್ಲಿ ಒಟ್ಟು 441 ಸಾವು

ಬೆಂಗಳೂರು: ತಡವಾಗಿ ರೋಗ ಪತ್ತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಒಂದು ತಿಂಗಳಲ್ಲಿ 128 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 441ಕ್ಕೆ ಏರಿದೆ.

ಕಳೆದ ಒಂದು ತಿಂಗಳಲ್ಲಿ 253 ಮಂದಿಗೆ ಈ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,841ಕ್ಕೆ ಏರಿದೆ. ವರದಿಯಾದ ಒಟ್ಟು ಪ್ರಕರಣಗಳಲ್ಲಿ ಶೇ 30ಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿಯೇ ದೃಢಪಟ್ಟಿವೆ. ಈವರೆಗೆ 1,212 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಅವರಲ್ಲಿ 149 ಮಂದಿ ಸಾವಿಗೀಡಾಗಿದ್ದಾರೆ.

ಧಾರವಾಡದಲ್ಲಿ 342, ವಿಜಯಪುರ 228, ಕಲಬುರ್ಗಿಯಲ್ಲಿ 213, ಬಳ್ಳಾರಿಯಲ್ಲಿ 169, ಚಿತ್ರದುರ್ಗದಲ್ಲಿ 165, ಬೆಳಗಾವಿಯಲ್ಲಿ 159, ರಾಯಚೂರಿನಲ್ಲಿ 141, ಮೈಸೂರಿನಲ್ಲಿ 132, ಬಾಗಲಕೋಟೆಯಲ್ಲಿ 131, ದಾವಣಗೆರೆಯಲ್ಲಿ 123, ಕೋಲಾರದಲ್ಲಿ 114, ಹಾಗೂ ದಕ್ಷಿಣ ಕನ್ನಡದಲ್ಲಿ 103 ದೃಢ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗೆ ಇದೆ.

13 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿದೆ. ಧಾರವಾಡದಲ್ಲಿ 40, ಬಳ್ಳಾರಿಯಲ್ಲಿ 28, ದಕ್ಷಿಣ ಕನ್ನಡದಲ್ಲಿ 25, ಕಲಬುರ್ಗಿಯಲ್ಲಿ 24, ದಾವಣಗೆರೆ ಹಾಗೂ ಮೈಸೂರಿನಲ್ಲಿ ತಲಾ 20, ಶಿವಮೊಗ್ಗದಲ್ಲಿ 15, ಬಾಗಲಕೋಟೆಯಲ್ಲಿ 13, ರಾಯಚೂರಿನಲ್ಲಿ 12, ಕೋಲಾರ, ಹಾಸನ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಹಾಗೂ ಗದಗದಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

Sampriya YK

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

5 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

5 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

7 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

7 hours ago