News Karnataka Kannada
Monday, April 29 2024
ಕರ್ನಾಟಕ

ಕರ್ನಾಟಕದಲ್ಲಿ ʻರಾಷ್ಟ್ರೀಯ ಶಿಕ್ಷಣ ನೀತಿ-2020ʼ ಇಂದಿನಿಂದ ಜಾರಿ

Indepenceday Cm Basavarajbommai 15082021
Photo Credit :

ಬೆಂಗಳೂರು: ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಇಂದಿನಿಂದ (ಸೋಮವಾರ) ಜಾರಿಗೆ ಬಂದಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿಯಿಂದಲೇ ವರ್ಚುವಲ್ ಮೂಲಕ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಹಸಿರು ನಿಶಾನೆ ತೋರಿಸಿದರು. ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ಉನ್ನತ ಶಿಕ್ಷಣ ವಿಭಾಗದಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಕರ್ನಾಟಕ ಇಡೀ ದೇಶದಲ್ಲಿ ಈ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಹೊಸ ಮನ್ವಂತರ ಆರಂಭವಾಗಲಿದೆ ಎಂದು ಪ್ರದಾನ್‌ ಆಶಯ ವ್ಯಕ್ತಪಡಿಸಿದರು. ಅ. 1ರಿಂದ ಪದವಿ ಮೊದಲ ವರ್ಷದ ತರಗತಿಗಳು ಆರಂಭವಾಗಲಿವೆ. ಮೊದಲ ವರ್ಷದ ಪದವಿಗೆ ದಾಖಲಾಗುವ ಎಲ್ಲ ವಿದ್ಯಾರ್ಥಿಗಳಿಗೂ ಸರ್ಕಾರದ ವತಿಯಿಂದ ಉಚಿತವಾಗಿ ಟ್ಯಾಬ್ಲೆಟ್ ಪಿಸಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು