News Karnataka Kannada
Sunday, May 05 2024
ಕರ್ನಾಟಕ

ಕರ್ನಾಟಕದ ಅಭಿವೃದ್ದಿಗೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

Bommai And Modi
Photo Credit :

ನವದೆಹಲಿ, – ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸಹಕಾರ ಮತ್ತು ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯವನ್ನು ಪ್ರಗತಿಪಥದತ್ತ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರದಿಂದ ಎಲ್ಲ ಸಹಾಯ ನೀಡುವುದಾಗಿ ವಾಗ್ದಾನ ನೀಡಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ನಿವಾಸದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶುಭಹಾರೈಸಿ ನೆರವು ನೀಡುವ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಸವರಾಜ್ ಬೊಮ್ಮಾಯಿ ಅವರು ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.ಇದಕ್ಕೂ ಮುನ್ನ ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.ಬೆಳಗ್ಗೆ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ,ರಾಜನಾಥ್ ಸಿಂಗ್, ಗಜೇಂದ್ರ ಸಿಂಗ್ ಶೇಖಾವತ್, ಪ್ರಹ್ಲಾದ ಜೋಷಿ, ಮತ್ತು ಜನರನ್ನು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.ಇದೇ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರ ಸಭೆ ನಡೆಸಿ ರಾಜ್ಯದ ಯೋಜನೆಗಳನ್ನು ಶೀಘ್ರಗತಿಯಲ್ಲಿ ಮಂಜೂರು ಮಾಡಿಸುವ ಎಲ್ಲರೂ ಸಂಘಟಿತ ಪ್ರಯತ್ನ ಮಾಡುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ನೂತನ ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿ ಹಾಗೂ ಯಾರನ್ನೆಲ್ಲಾ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎನ್ನುವುದು ಸೇರಿದಂತೆ ಹಲವು ವಿಷಯಗಳ ಕುರಿತು ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು