News Karnataka Kannada
Thursday, May 02 2024
ಕರ್ನಾಟಕ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ನಿಧನ

Koraga
Photo Credit :

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ಅವರು ಭಾನುವಾರ ನಿಧನರಾಗಿದ್ದಾರೆ. ಅವರಿಗೆ 105 ವರ್ಷ ವಯಸ್ಸಾಗಿತ್ತು. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಇಡೀ ದೇಶಕ್ಕೇ ಪರಿಚಯಿಸಿರುವ ಶತಾಯುಷಿ ಡೋಲು ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ 105 ವರ್ಷ ವಯಸ್ಸಿನ ಗುರುವ ಕೊರಗ ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ಡೋಲು ಕಲಾವಿದ ಹಿರಿಯಡ್ಕದ ತೋಮ ಮತ್ತು ತುಂಬೆ ದಂಪತಿ ಪುತ್ರರಾಗಿರುವ ಇವರು, 12ನೆ ವಯಸ್ಸಿನಿಂದಲೂ ಡೋಲು ಬಾರಿಸುವುದು ಮತ್ತು ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.ತುಳುನಾಡಿನ ಜಾನಪದ ಸಂಸ್ಕೃತಿಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು