News Karnataka Kannada
Friday, May 03 2024
ಕರ್ನಾಟಕ

ಕಿಸಾನ್ ಸಮ್ಮಾನ್: ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆ

Bc Patil 09082021
Photo Credit :

ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ ₹ 6 ಸಾವಿರ ಆರ್ಥಿಕ ನೆರವನ್ನು ನೀಡುತ್ತಿದೆ.

ಈ ಅನುದಾನವನ್ನು 2 ಸಾವಿರ ರೂ. ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಇಲ್ಲಿಯವರಿಗೆ 55.06 ಲಕ್ಷ ರೈತ ಕುಟುಂಬಗಳು 1ನೇ ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದಾರೆ. 2019ರ ಮಾರ್ಚ್ ನಿಂದ ಜುಲೈ 2021ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು ₹ 6940.07 ಕೋಟಿ ಗಳ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ಅವರು ಪಾಟೀಲ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ ರೂ. ಗಳ ಆರ್ಥಿಕ ಸಹಾಯಧವನ್ನು ನೀಡಲಾಗಿದೆ. ಆಧಾರಿತ ಆಧಾರಿತ ಡಿಬಿಟಿ ಮುಖಾಂತರ ಪಾವತಿಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು