Categories: ಕರ್ನಾಟಕ

ಕೆಆರ್ ಎಸ್ ಜಲಾಶಯದಲ್ಲಿ ಏರಿದ ನೀರಿನ ಪ್ರಮಾಣ

ಮಂಡ್ಯ: ಕೊಡಗಿನಲ್ಲಿ ಒಂದಷ್ಟು ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯದಲ್ಲಿ ಸ್ವಲ್ಪ ಮಟ್ಟಿಗೆ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಮೊದಲೆಲ್ಲ ಈ ವೇಳೆಗೆ ನೂರರ ಗಡಿ ದಾಟುತ್ತಿತ್ತಾದರೂ ಇದೀಗ 90ಕ್ಕೇರಿದೆ. ಸದ್ಯಕ್ಕೆ ಇಷ್ಟಕ್ಕೆ ಖುಷಿ ಪಡುವುದು ಅನಿವಾರ್ಯವಾಗಿದ್ದು, ಈ ಬಾರಿಯೂ ಜಲಾಶಯ ಭರ್ತಿಯಾಗುವುದು ಅನುಮಾನವಾಗಿದೆ.

ಕಳೆದ ವರ್ಷ ಇದೇ ವೇಳೆಗೆ ಕೆಆರ್ ಎಸ್ ಅಣೆಕಟ್ಟೆಯಲ್ಲಿ 97.19 ಅಡಿ ನೀರಿತ್ತು. ಅಲ್ಲದೆ, ಜಲಾಶಯಕ್ಕೆ 4119 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಜತೆಗೆ 7760 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿತ್ತಲ್ಲದೆ, ಜಲಾಶಯದಲ್ಲಿ 20.68 ಟಿಎಂಸಿ ನೀರು ಸಂಗ್ರಹವಾಗಿತ್ತು. ಈ ಬಾರಿ ಇದೀಗ ನೀರಿನ ಮಟ್ಟ 90.38 ಅಡಿಗೇರಿದೆ. 4649 ಕ್ಯೂಸೆಕ್ ಒಳಹರಿವಿದೆ. 3949 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ ಈಗ 16.16 ಟಿಎಂಸಿ ನೀರು ಸಂಗ್ರಹವಾಗಿದೆ.

ಹಾಗೆ ನೋಡಿದರೆ ಕಳೆದ ವರ್ಷ ಈ ವೇಳೆಗೆ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಜು.30 ರಿಂದ ನಾಲೆಗಳಿಗೆ ನೀರು ಹರಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ, ಈ ಬಾರಿ ಆಗಸ್ಟ್ ಮೊದಲವಾರ ಕಳೆದರೂ ಕಾವೇರಿ ಸಲಹಾ ಸಮಿತಿ ಸಭೆ ಕರೆಯುವ ಗೋಜಿಗೆ ಯಾರೊಬ್ಬರೂ ಮುಂದಾಗಿಲ್ಲ. ಆ.14ರಂದು ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಸಿದ ಬಳಿಕ ನೀರು ಬಿಡುಗಡೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಜಲಾಶಯದ ನೀರಿನ ಸಂಗ್ರಹ ಪರಿಸ್ಥಿತಿಯನ್ನು ಅವಲೋಕನ ಮಾಡಿದರೆ ರೈತರ ಬೆಳೆಗಳಿಗೆ ನೀರು ಸಿಗುವುದು ಅನುಮಾನವಾಗಿದೆ. ಏಕೆಂದರೆ, ಬೆಳೆಗಳಿಗೆ ನೀರು ಹರಿಸಬೇಕಾದರೆ ಜಲಾಶಯದ ನೀರಿನ ಮಟ್ಟ ಕನಿಷ್ಠ 100 ಅಡಿ ದಾಟಬೇಕು. ಆದರೆ, ಈಗ ಜಲಾಶಯದಲ್ಲಿರುವುದು 90 ಅಡಿ ನೀರು ಮಾತ್ರವಿದೆ. ಇನ್ನೂ 10 ಅಡಿ ನೀರಿನ ಕೊರತೆ ಎದುರಾಗಿದೆ. ಜಲಾಶಯದ ಒಳಹರಿವಿನಲ್ಲೂ ಏರಿಕೆ ಕಂಡುಬರದ ಹಿನ್ನೆಲೆಯಲ್ಲಿ ಬೆಳೆಗಳಿಗೆ ನೀರು ಸಿಗುವ ಸಾಧ್ಯತೆಗಳು ಕ್ಷೀಣಿಸಿದೆ.

ಆ.14ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಪ್ರಸ್ತುತ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರು ಹರಿಸುವ ಸಂಬಂಧ ತೀರ್ಮಾನ ಕೈಗೊಳ್ಳದೆ ಕೇವಲ ಕೆರೆ-ಕಟ್ಟೆಗಳನ್ನು ತುಂಬಿಸಿ ಜನ-ಜಾನುವಾರುಗಳ ಕುಡಿಯುವ ನೀರಿಗೆ ಆಸರೆ ಕಲ್ಪಿಸುವ ಸಂಬಂಧ ನಿರ್ಧಾರ ಪ್ರಕಟಿಸಬಹುದು ಎಂದು ಹೇಳಲಾಗುತ್ತಿದೆ. ಕೊಡಗಿನಲ್ಲಿ ಈಗ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಆಗಸ್ಟ್ನಲ್ಲಿ ಹೆಚ್ಚುವರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಹತ್ತು ದಿನಗಳ ಕಾಲ ಸರ್ಕಾರ ಕಾದುನೋಡುವ ತಂತ್ರ ಅನುಸರಿಸುತ್ತಿದೆ.

ವರುಣ ಕೃಪೆಯಿಂದ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದರೆ ಬೆಳೆಗಳಿಗೆ ನೀರು ಹರಿಸುವ ಬಗ್ಗೆಯೂ ಸರ್ಕಾರ ಆಲೋಚನೆ ನಡೆಸಬಹುದು. ಇಲ್ಲವಾದಲ್ಲಿ ಬೆಳೆಗಳಿಗೆ ನೀರು ಸಿಗುವ ಸಾಧ್ಯತೆಗಳಿಲ್ಲ. ಒಟ್ಟಾರೆ ಈಗಿನ ಪರಿಸ್ಥಿತಿ ಮಾತ್ರ ಭೀಕರವಾಗಿದ್ದು, ಒಂದು ವೇಳೆ ಕೊಡಗಿನಲ್ಲಿ ಇನ್ನು ಮುಂದಿನ ದಿನಗಳಲ್ಲಿ ಮಳೆಯಾದರೆ ಮಾತ್ರ ಎಲ್ಲ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯವಾಗಲಿದೆ.

Desk

Recent Posts

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

41 seconds ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

12 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

30 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

41 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago